ನಾಪೋಕ್ಲು, ಮಾ. ೨೯: ನಗರದ ಮಾರುಕಟ್ಟೆ ಬಳಿಯಿಂದ ಮಡಿಕೇರಿಗೆ ಹೋಗುವ ರಸ್ತೆಯನ್ನು ಡಾಂಬರೀಕರಣಗೊಳಿಸಿದ್ದು, ಈ ರಸ್ತೆಗೆ ಚರಂಡಿಯನ್ನು ನಿರ್ಮಿಸದಿರುವುದರಿಂದ ಮಳೆಯ ನೀರು ರಸ್ತೆಯಲ್ಲಿ ಹರಿದು ಪಾದಚಾರಿಗೆೆ ಮತ್ತು ವಾಹನಗಳಿಗೆ ತೊಂದರೆಯಾಗಿದೆ. ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿರುವುದರಿಂದ ನೂತನ ರಸ್ತೆಯು ಗುಂಡಿ ಬೀಳುವ ಸಾಧ್ಯತೆ ಇದೆ. ಕೂಡಲೇ ಸಂಬAಧಪಟ್ಟ ಲೋಕೋಪಯೋಗಿ ಇಲಾಖೆ ಈ ರಸ್ತೆಯ ಎರಡು ಬದಿಯಲ್ಲಿ ಚರಂಡಿಯನ್ನು ನಿರ್ಮಿಸಿ ಸುಗಮವಾಗಿ ಮಳೆ ನೀರು ಹರಿಯುವಂತೆ ಮಾಡಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.