ನಾಪೋಕ್ಲು, ಮಾ. ೨೯: ಜಿಲ್ಲಾ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಶಾಸಕ ಕೆ.ಜಿ. ಬೋಪಯ್ಯ, ಕಕ್ಕಬ್ಬೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಭಾಭವನ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ಕಾರ್ಯಕ್ರಮದಲ್ಲಿ ಸಂಘದ ಪರವಾಗಿ ಶಾಲು ಹೊದಿಸಿ ಫಲತಾಂಬೂಲ ನೀಡಿ ಸನ್ಮಾನಿಸಿದರು.
ಇವರೊಂದಿಗೆ ಪಶ್ಚಿಮ ಘಟ್ಟ ಸಂರಕ್ಷಣೆ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಲಿಯಾಟಂಡ ರಘು ತಮ್ಮಯ್ಯ, ಬ್ಯಾಂಕ್ ನಿರ್ದೇಶಕ ಬಡಕಡ ಸುರೇಶ್ ಬೆಳ್ಯಪ್ಪ, ಇವರುಗಳನ್ನು ಸನ್ಮಾನಿಸಲಾಯಿತು.