ಚೆಯ್ಯಂಡಾಣೆ, ಮಾ. ೨೯: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರದ ಮುಂಡ್ಯೋಳAಡ ಕುಟುಂಬಸ್ಥರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಫಸಲನ್ನು ನಾಶಪಡಿಸಿದ್ದು, ಕೂಡಲೇ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಓಡಿಸಿ ನಷ್ಟ ಅನುಭವಿಸಿದ ಗ್ರಾಮಸ್ಥರಿಗೆ ತ್ವರಿತವಾಗಿ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ಗ್ರಾಮಸ್ಥರು ಪತ್ರಿಕೆಯೊಂದಿಗೆ ಮಾಹಿತಿ ನೀಡಿ ಈ ವಾಪ್ತಿಯಲ್ಲಿ ಕಾಡಾನೆ ನಿರಂತರ ದಾಳಿ ಮಾಡುತ್ತಿದ್ದು ಅರಣ್ಯಾಧಿಕಾರಿಗಳು ಕೂಡಲೇ ಇದಕ್ಕೊಂದು ಪರಿಹಾರ ಕಂಡುಕೊAಡು ಇನ್ನು ಮುಂದೆ ಕಾಡಾನೆ ಗ್ರಾಮಕ್ಕೆ ನುಸುಳದ ರೀತಿಯಲ್ಲಿ ಕ್ರಮಕೈಗೊಳ್ಳಬೇಕೆಂದರು. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು ಶಾಲಾ-ಕಾಲೇಜುಗಳಿಗೆ ತೆರಳಲು ಭಯಪಡುವಂತಾಗಿದೆ, ಕೂಡಲೇ ಅಧಿಕಾರಿಗಳು ಎಚ್ಚೆತ್ತು ಜೀವಹಾನಿ ಸಂಭವಿಸುವದಕ್ಕಿAತ ಮುಂಚೆ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.