ಕುಶಾಲನಗರ, ಮಾ. ೨೯ : ಕಾರ್ಮಿಕ ಸಂಘಟನೆಗಳ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ೨ ದಿನಗಳ ಮುಷ್ಕರ ಬೆಂಬಲಿಸಿ ಮಂಗಳವಾರ ಕುಶಾಲನಗರದಲ್ಲಿ ದಲಿತ ಸಂಘರ್ಷ ಸಮಿತಿ ಭೀಮವಾದ ವತಿಯಿಂದ ಪ್ರತಿಭಟನೆ ನಡೆಯಿತು.
ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ. ರಾಜು ನೇತೃತ್ವದಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಲಾಯಿತು.
ಈ ಸಂದರ್ಭ ವಿವಿಧ ಸಂಘಟನೆಗಳ ಪ್ರಮುಖರಾದ ನಿರ್ವಾಣಪ್ಪ, ಎಸ್.ಕೆ. ಸ್ವಾಮಿ, ರಮೇಶ್, ಸಾವಿತ್ರಮ್ಮ, ಜಯಮ್ಮ, ಹರಳಯ್ಯ, ಕೆ.ಜಿ. ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.