ಆಲೂರು-ಸಿದ್ದಾಪುರ, ಮಾ. ೩೦: ಸೋಮವಾರಪೇಟೆ ತಾಲೂಕು ಆರೋಗ್ಯ ಕೇಂದ್ರದ ತಂಬಾಕು ನಿಯಂತ್ರಣ ಕೋಶ ಮತ್ತು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಇಲ್ಲಿನ ಅಂಗಡಿ ಮತ್ತು ಬಾರ್‌ಗಳ ಮಾಲೀಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ಆರೋಗ್ಯ ಸಹಾಯಕರಾದ ವಿಶ್ವಜ್ಞ, ಪ್ರವೀಣ್‌ಕುಮಾರ್, ಪೊಲೀಸ್ ಸಿಬ್ಬಂದಿ ನೆಹರುಕುಮಾರ್ ಇದ್ದರು.