ಕೊಡ್ಲಿಪೇಟೆ, ಮಾ. ೩೦: ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಎಸ್.ಎಸ್. ನಾಗರಾಜು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಉದ್ಘಾಟಿಸಿದರು. ಪ್ರಾಂಶುಪಾಲ ಜಗದೀಶ್ ಬಾಬು, ಸಂಸ್ಥೆಯ ಉಪಾಧ್ಯಕ್ಷ ಶಂಭುಲಿAಗಪ್ಪ, ನಿರ್ದೇಶಕ ಯತೀಶ್, ಪದವಿ ಕಾಲೇಜು ಪ್ರಾಂಶುಪಾಲ ನಿರಂಜನ್, ಹಿರಿಯ ಉಪನ್ಯಾಸಕ ಪ್ರವೀಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿದ್ಯಾರ್ಥಿಗಳಾದ ಅಕ್ಷಯ್, ಪವಿತ್ರ, ಅನನ್ಯ, ಶರತ್ ಅವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ನಿಶ್ಮಿತಾ ಅವರಿಂದ ಭರತನಾಟ್ಯ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.