ಭಾಗಮಂಡಲ, ಮಾ. ೩೦: ಕಳೆದ ಹಲವಾರು ತಿಂಗಳಿನಿAದ ಕೋವಿಡ್‌ನಿಂದಾಗಿ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ತೀರ್ಥಸ್ನಾನಕ್ಕೆ ಅವಕಾಶ ಸ್ಥಗಿತಗೊಳಿಸಲಾಗಿತ್ತು. ಇದೀಗ ಭಕ್ತಾದಿಗಳಿಗೆ ಅನುಕೂಲವಾಗುವಂತೆ ತಲಕಾವೇರಿ ಕೊಳದಲ್ಲಿ ತೀರ್ಥಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ನಾನದ ಬಳಿಕ ತೀರ್ಥ ಕುಂಡಿಕೆಯಿAದ ಭಕ್ತಾದಿಗಳಿಗೆ ತೀರ್ಥ ಪ್ರೋಕ್ಷಣೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ದೇವಾಲಯದ ಮುಖ್ಯ ಕಾರ್ಯದರ್ಶಿ ಕೃಷ್ಣಪ್ಪ ತಿಳಿಸಿದ್ದಾರೆ.