*ಗೋಣಿಕೊಪ್ಪ, ಮಾ. ೩೦: ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆಯಿತು.
ಪೊನ್ನಂಪೇಟೆ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಮಿತಿಯ ಪ್ರಥಮ ಸಭೆ ಇದಾಗಿದ್ದು, ತಾಲೂಕಿನಲ್ಲಿ ಅಕ್ರಮ ಸಕ್ರಮಕ್ಕೆ ಸಲ್ಲಿಕೆಯಾದ ೧೧೦೪ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿತು. ಸುಮಾರು ೨೫ ಅರ್ಜಿಗಳನ್ನು ಪರಿಶೀಲಿಸಿ ಅಂತಿಮ ಹಂತದ ವಿಲೇವಾರಿಗೆ ಕ್ರಮ ಕೈಗೊಂಡಿರುವುದಾಗಿ ಗಿರೀಶ್ ಗಣಪತಿ ಅವರು ಮಾಹಿತಿ ನೀಡಿದರು.
ಉಳಿದ ಅರ್ಜಿಗಳನ್ನು ೧೦ ದಿನಕ್ಕೊಮ್ಮೆ ತಹಶೀಲ್ದಾರ್ ಹಾಗೂ ಸಮಿತಿಯ ಸದಸ್ಯರನ್ನೊಳಗೊಂಡ ಸಭೆಯಲ್ಲಿ ವಿಲೇವಾರಿಗೊಳಿಸುವ ಚಿಂತನೆ ಹರಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎನ್.ಎಸ್. ಪ್ರಶಾಂತ್, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್, ಲಾಲ ಭೀಮಯ್ಯ, ಶಿರಸ್ತೆದಾರ್ ರಾಧಕೃಷ್ಣ, ಕಂದಾಯ ಪರಿವೀಕ್ಷಕ ಸುದೀಂದ್ರ ರೈ, ಉಪಸ್ಥಿತರಿದ್ದರು.