ಮಡಿಕೇರಿ, ಮಾ. ೩೦ : ಸಹಕಾರ ಕ್ಷೇತ್ರದಲ್ಲಿನ ಸೇವೆ - ಸಾಧನೆಗಾಗಿ ರಾಜ್ಯ ಸರಕಾರದ ಮೂಲಕ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಅವರನ್ನು ಬ್ಯಾಂಕ್ ಆಡಳಿತ ಮಂಡಳಿಯಿAದ ಸನ್ಮಾನಿಸಲಾಯಿತು.
ನಿನ್ನೆ ನಡೆದ ಸಭೆಯ ಸಂದರ್ಭದಲ್ಲಿ ಸನ್ಮಾನಿತರನ್ನು ಗೌರವಿಸಲಾಯಿತು. ಈ ಸಂದರ್ಭ ಆಡಳಿತ ಮಂಡಳಿ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಇತರ ನಿರ್ದೇಶಕರುಗಳು, ಸಹಕಾರ ಯೂನಿಯನ್ ಅಧ್ಯಕ್ಷ ಮನುಮುತ್ತಪ್ಪ, ಬ್ಯಾಂಕ್ ಸಿಬ್ಬಂದಿಗಳು ಹಾಜರಿದ್ದರು.