ಮಡಿಕೇರಿ, ಮಾ. ೩೦: ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕವು ಹಲವು ಸಮಾಜ ಮುಖಿ ಕಾರ್ಯಚಟುವಟಿಕೆ ಕೈಗೊಳ್ಳುತ್ತಿದ್ದು, ರೆಡ್ಕ್ರಾಸ್ ಸಂಸ್ಥೆಯಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಮತ್ತಷ್ಟು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಕರೆ ನೀಡಿದರು.
ನಗರದ ಬಾಲಭವನದಲ್ಲಿ ನಡೆದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ೪೦-೪೫ ವರ್ಷ ಮೇಲ್ಪಟ್ಟವರಿಗೆ ಮೂಳೆ ಸಂಬAಧಿಸಿದ ತೊಂದರೆಗಳು ಉಂಟಾಗುತ್ತಿದ್ದು, ಆ ದಿಸೆಯಲ್ಲಿ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ಆಯೋಜಿಸುವಂತಾಗಬೇಕು. ಹಾಗೆಯೇ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಸಲಹೆಯಿತ್ತರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಗೆ ಮತ್ತಷ್ಟು ಯುವಜನರು ಹೆಸರು ನೋಂದಾಯಿಸಿ ಸಂಸ್ಥೆಯ ಬೆಳವಣಿಗೆಗೆ ಹಾಗೂ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವಂತಾಗಬೇಕು ಎಂದು ಹೇಳಿದರು. ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಬಿ.ಕೆ. ರವೀಂದ್ರ ರೈ ಅವರು ಮಾತನಾಡಿ ಕಳೆದ ಎರಡು ಮೂರು ವರ್ಷಗಳಿಂದ ರೆಡ್ಕ್ರಾಸ್ ಸಂಸ್ಥೆಯಲ್ಲಿ ಕ್ರೀಯಾಶೀಲ ಚಟುವಟಿಕೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಹೀಗೆ ಹಲವು ಇಲಾಖೆಗಳ ಜೊತೆಗೂಡಿ ರಕ್ತದಾನ ಶಿಬಿರ, ಕೊರೊನಾ ಸಂದರ್ಭದಲ್ಲಿ ಆಹಾರ ಕಿಟ್ ವಿತರಣೆ, ಮದ್ಯಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಅಭಿಯಾನ, ಪರಿಸರ ಹಾಗೂ ಯೋಗ ದಿನಾಚರಣೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ರೆಡ್ಕ್ರಾಸ್ ಭವನ ನಿರ್ಮಾಣವಾಗಿದ್ದು, ರೂ. ೬೦ ಲಕ್ಷ ವೆಚ್ಚದಲ್ಲಿ ಕಾಮಗಾರಿ ಪೂರ್ಣ ಗೊಂಡಿದೆ ಎಂದು ರವೀಂದ್ರ ರೈ ಹೇಳಿದರು.
ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ ಅವರು ೨೦೨೦-೨೧ ನೇ ಸಾಲಿನ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆದರು. ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ಜೋಸೆಫ್ ಶ್ಯಾಮ್ ಮಾತನಾಡಿ ರೆಡ್ಕ್ರಾಸ್ ಸಂಸ್ಥೆ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕೋರಿದರು.
ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್ ಮಾತನಾಡಿ, ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂದರ್ಭದಲ್ಲಿ ರೆಡ್ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು ಸ್ವಯಂಪ್ರೇರಣೆಯಿAದ ತೊಡಗಿಸಿ ಕೊಂಡು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಕೋವಿಡ್-೧೯ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದ ಮುರಳೀಧರ ಹಾಗೂ ವಿಕ್ರಮ್ ಶೆಟ್ಟಿ ಜಾದೂಗಾರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ರೆಡ್ಕ್ರಾಸ್ ಸಂಸ್ಥೆಯ ಆಡಳಿತಾಧಿಕಾರಿ ಪೊನ್ನಮ್ಮ ಆಯವ್ಯಯ ಮಂಡಿಸಿದರು. ಎಚ್.ಟಿ. ಅನಿಲ್ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಮುರಳೀಧರ ಸ್ವಾಗತಿಸಿ, ವಂದಿಸಿದರು.