ಸೋಮವಾರಪೇಟೆ, ಮಾ. ೩೧: ರೈತರು ತಾವು ಮಾಡುವ ಕೃಷಿ ಚಟುವಟಿಕೆಗಳಲ್ಲಿ ಸುಧಾರಿತ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ತಾವು ಬೆಳೆದ ಪದಾರ್ಥಗಳನ್ನು ತಾವೇ ಮಾರಾಟ ಮಾಡುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿ ಗಳಾಗಬೇಕೆಂದು ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ರಮೇಶ್ ಬಾಬು ಹೇಳಿದರು.
ಇಲ್ಲಿನ ಸಫಾಲಿ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಭುವನ ಮಂದಾರ ರೈತ ಉತ್ಪಾದಕರ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರೈತರಿಂದ ರೈತರಿಗಾಗಿ ರೈತರಿಗೋಸ್ಕರ ಇರುವ ರೈತ ಉತ್ಪಾದಕರ ಸಂಸ್ಥೆಗಳು ಹೆಚ್ಚು ಪ್ರವರ್ಧಮಾನಕ್ಕೆ ಬರಬೇಕು. ರೈತ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಿ, ಉತ್ತಮ ಬೆಲೆಯನ್ನು ಪಡೆದುಕೊಳ್ಳಲು ರೈತರು ಮುಂದಾಗಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರು ತಮ್ಮ ಮಕ್ಕಳಿಗೂ ಕೃಷಿಗೆ ಸಂಬAಧಿಸಿದAತೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು.
ಭಾರತ ಸರಕಾರ ಓ.ಡಿ.ಓ.ಪಿ ಯೋಜನೆಯ ಮೂಲಕ ರೈತರಿಗೆ ಕಾಫಿ ಉದ್ಯಮದಲ್ಲಿ ನೂತನ ಆವಿಷ್ಕಾರಗಳಿಗೆ ರೂ. ೧೦ಲಕ್ಷದವರೆಗೆ ಸಾಲ ಸೌಲಭ್ಯ ಮತ್ತು ತರಬೇತಿಯನ್ನೂ ಸಹ ನೀಡುತ್ತಿದೆ ಎಂದರು.
ಕಾಫಿ ಮಂಡಳಿ ವಿಸ್ತರಣಾಧಿಕಾರಿ ಲಕ್ಷಿö್ಮಕಾಂತ್ ಅವರು, ಕಾಫಿ ಬೆಳೆಗಾರರು ಬೆಳೆಯ ಬಗ್ಗೆ ವಹಿಸಬೇಕಾದ ಎಚ್ಚರಿಕೆಯ ಕ್ರಮಗಳು, ರೋಗದ ಹತೋಟಿ ಮತ್ತಿತರ ಸುಧಾರಿತ ಕಾಫಿ ಕೃಷಿಯ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಓ.ಡಿ.ಪಿ. ಸಂಸ್ಥೆಯ ನಿರ್ದೇಶಕರಾದ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ, ಸಂಯೋಜಕರಾದ ರಮೇಶ್, ಸಂಸ್ಥೆಯ ನಿರ್ದೇಶಕರುಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ಕೃಷಿ ರತ್ನ ಪ್ರಶಸ್ತಿ ಪಡೆದ ಬೇಳೂರಿನ ಕೆ.ಡಿ. ಕುಮಾರ್ ಅವರನ್ನು ಸನ್ಮಾನಿಸಲಾಯಿತು.