ಮಡಿಕೇರಿ, ಮಾ. ೩೧: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗೃಹ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಕ್ಷಯರೋಗ ನಿರ್ಮೂಲನೆ ಬಗ್ಗೆ ಕಾರ್ಯಾಗಾರ ನಡೆಯಿತು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ಷಯರೋಗ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಆ ನಿಟ್ಟಿನಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವಂತಾಗಬೇಕು ಎಂದು ಕರೆ ನೀಡಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಕೆ.ಬಿ. ಕಾರ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಕ್ಷಯರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಎನ್. ಆನಂದ್ ಮಾತನಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಶಸ್ತç ಚಿಕಿತ್ಸಕರು ಹಾಗೂ ಪ್ರಾಂಶುಪಾಲ ಡಾ. ವಿಶಾಲ್‌ಕುಮಾರ್, ಐಎಂಎ ಅಧ್ಯಕ್ಷ ಡಾ. ಶ್ಯಾಮ್ ಅಪ್ಪಣ್ಣ, ಕಾರ್ಯಾಗಾರದ ವಿಶೇಷ ಉಪನ್ಯಾಸಕ ರಾದ ವಿಶ್ವಸಂಸ್ಥೆ ಸಲಹೆಗಾರರಾದ ಡಾ. ಶಾಹಾಜಿಯ ಅನುಜುಮ್, ಉಪನ್ಯಾಸಕರಾದ ಡಾ. ಪಿ.ಎಸ್. ಬಾಲು, ಡಾ. ರಾಮಚಂದ್ರ ಕಾಮತ್, ಸಿಬ್ಬಂದಿಗಳು ಇತರರು ಇದ್ದರು.

ಡಾ. ಕೃತಿಕಾ ನಿರೂಪಿಸಿದರು. ಡಾ. ಪ್ರೇರಣಾ ಪ್ರಾರ್ಥಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿ ಡಾ. ರಾಮಚಂದ್ರ ಕಾಮತ್ ಅವರು ಸ್ವಾಗತಿಸಿದರು. ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಎಂ. ಮಹಾದೇವಪ್ಪ ವಂದಿಸಿದರು.