ಸೋಮವಾರಪೇಟೆ, ಮಾ. ೩೧: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಹಿರಿಯ ಸಾಹಿತಿ ಜಲಾ ಕಾಳಪ್ಪ ಕರೆ ನೀಡಿದರು.
ಇಲ್ಲಿನ ಮಹಿಳಾ ಸಹಕಾರ ಸಮಾಜದ ವತಿಯಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಸಾಮಾಜಿಕವಾಗಿ ಬಹಳಷ್ಟು ಮುಂದುವರೆದಿದ್ದಾರೆ. ಮಹಿಳೆಯರ ಪರವಾಗಿ ಕಾನೂನುಗಳಿದ್ದರೂ ಸಹ ಇಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಬಿದ್ದಿಲ್ಲ ಎಂದು ವಿಷಾಧಿಸಿದ ಅವರು, ಯಾವೊಬ್ಬ ಮಗುವೂ ಸಹ ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ವಹಿಸಿದ್ದರು. ವೇದಿಕೆಯಲ್ಲಿ ಪದಾಧಿಕಾರಿಗಳಾದ ಜಲಜಾ ಶೇಖರ್, ಜ್ಯೋತಿ ಶುಭಾಕರ್, ಶೋಭಾ ಯಶ್ವಂತ್, ವಿಜಯಲಕ್ಷಿö್ಮÃ ಸುರೇಶ್, ಶೋಭಾ ಶಿವರಾಜ್, ಚಂದ್ರಕಲಾ ಗಿರೀಶ್, ಗೀತಾರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ನಿರ್ದೇಶಕರಾದ ವರಲಕ್ಷಿö್ಮÃ ಸಿದ್ದೇಶ್ವರ್ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಚಂದ್ರಕಲಾ ಅವರಿಂದ ಲಾಫಿಂಗ್ ಯೋಗ ತರಬೇತಿ ನಡೆಯಿತು. ನಂತರ ಸದಸ್ಯರುಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.