ಮಡಿಕೇರಿ, ಮಾ. ೩೧: ಮಡಿಕೇರಿ ತಾಲೂಕು ಸವಿತಾ ಸಮಾಜದ ಜಿಲ್ಲಾಮಟ್ಟದ ಕ್ರೀಡೋತ್ಸವದ ಮೊದಲ ಹಂತವಾಗಿ ಬ್ಯಾಡ್ಮಿಂಟನ್ ಪಂದ್ಯಾಟ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.
ಉದ್ಘಾಟನೆಯನ್ನು ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಸಮಿ ಸುಬ್ಬಯ್ಯ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಕೆ.ಎಸ್. ದೊರೇಶ್ ವಹಿಸಿದ್ದರು. ತಾಲೂಕು ಅಧ್ಯಕ್ಷ ಎಂ.ಟಿ. ಮಧು ಹಾಗೂ ಕ್ರೀಡಾ ಸಮಿತಿ ಅಧ್ಯಕ್ಷ ಮಧು ಚೆಟ್ಟಿಮಾನಿ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಸುಂದರಮ್ಮ ಉಪಸ್ಥಿತರಿದ್ದರು.
ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಮಾರು ೫೦ ರಿಂದ ೬೦ ಮಂದಿ ಕ್ರೀಡಾಪಟುಗಳು ಭಾಗವಹಿಸಿದ್ದರು.
ಮಡಿಕೇರಿ ತಾಲೂಕು ಸವಿತಾ ಸಮಾಜದ ವತಿಯಿಂದ ಏಪ್ರಿಲ್ ೪ ಮತ್ತು ೫ ರಂದು ನಡೆಯುವ ಕ್ರೀಡೋತ್ಸವದಲ್ಲಿ ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ನಡೆಯಲಿದೆ. ತಂಡಗಳು ಏಪ್ರಿಲ್ ೪ರ ಬೆಳಿಗ್ಗೆ ೧೦ ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕೆAದು ಪ್ರಕಟಣೆ ತಿಳಿಸಿದೆ.