ಕಣಿವೆ, ಮಾ. ೩೧: ನಡೆದಾಡುವ ದೇವರು ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೫ ನೇ ಹುಟ್ಟು ಹಬ್ಬ ಸಮಾರಂಭವನ್ನು ಹಾರಂಗಿ ಬಳಿಯ ಬೆಂಡೆಬೆಟ್ಟ ಗಿರಿಜನ ಹಾಡಿಯಲ್ಲಿ ತಾ. ೧ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕುಶಾಲನಗರ ತಾಲೂಕು ಸಿದ್ಧಗಂಗಾ ಶ್ರೀ ಭಕ್ತ ಮಂಡಳಿ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಂ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಆಗಮಿಸಲಿದ್ದಾರೆ ಎಂದು ಸಿದ್ಧಗಂಗಾ ಶ್ರೀ ಭಕ್ತ ಮಂಡಳಿ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.