ಸೋಮವಾರಪೇಟೆ, ಮಾ. ೩೧: ಸಮೀಪದ ಹಾನಗಲ್ಲು ಗ್ರಾಮದ ಸಮುದಾಯ ಭವನದಲ್ಲಿ ಪ್ರಕೃತಿ ರೈತ ಉತ್ಪಾದಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಓಡಿಪಿ ಮಹಿಳಾ ಸಾಂತ್ವನ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ನಡೆಯಿತು.
ಸಾಂತ್ವನ ಕೇಂದ್ರದ ಸಿಬ್ಬಂದಿಗಳಾದ ಎಂ.ಎಸ್. ಶ್ವೇತಾ ಮತ್ತು ಜ್ಯೋತಿ ಅವರು ಕೇಂದ್ರದಿAದ ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಿದರು. ಇದರೊಂದಿಗೆ ಮಹಿಳಾ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ತಿಳುವಳಿಕೆ ನೀಡಲಾಯಿತು.
ಮಹಿಳಾ ಸಾಂತ್ವನ ಕೇಂದ್ರದ ಸಹಾಯವಾಣಿ ೧೦೯೧ ಹಾಗೂ ೧೮೧ ಸಂಖ್ಯೆಯು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ತುರ್ತು ಸಂದರ್ಭದಲ್ಲಿ ಈ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಿದರೆ ತಕ್ಷಣ ಸ್ಪಂದನೆ ಲಭಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಓಡಿಪಿ ಸಂಸ್ಥೆಯ ನಿರ್ದೇಶಕ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ, ಯೋಜನಾ ಸಂಯೋಜಕರಾದ ಮೋಳಿ, ಪಶುವೈದ್ಯ ಇಲಾಖೆಯ ಡಾ. ಬದಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.