ಮುಳ್ಳೂರು, ಏ. ೧: ಸಮೀಪದ ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರಸಂತೆಯ ರೋವರ್ ಲೀಡರ್ ರಂಗಸ್ವಾಮಿ ಅವರ ನೇತೃತ್ವದಲ್ಲಿ ನೂತನವಾಗಿ ಪ್ರಾರಂಭಿಸಿರುವ ರೋವರ್ ಘಟಕವನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕೊಡಗು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಾನಿಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ತರಬೇತಿ ಆಯುಕ್ತ ಎನ್.ಎಲ್. ಸುರೇಶ್ಕುಮಾರ್, ಸೋಮವಾರಪೇಟೆ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸಂಘಟಕಿ ಸಿ. ದಮಯಂತಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್, ಪ.ಪೂ. ಕಾಲೇಜು ಪ್ರಾಂಶುಪಾಲ ಜಗದೀಶ್ ಬಾಬು, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಎಸ್.ಎಸ್. ನಾಗರಾಜ್, ವಿದ್ಯಾಸಂಸ್ಥೆ ನಿರ್ದೇಶಕರಾದ ಪರಮೇಶ್, ಯತೀಶ್ ಮುಂತಾದವರು ಉಪಸ್ಥಿತರಿದ್ದರು.