ಮಡಿಕೇರಿ, ಏ. ೧: ಚೆನ್ನಯ್ಯನಕೋಟೆ ಗ್ರಾ.ಪಂ. ವ್ಯಾಪ್ತಿಯ ಚೊಟ್ಟೆಪಾರೆ ಹಾಡಿಯ ಸಮುದಾಯ ಭವನದಲ್ಲಿ ಹಾಡಿಯ ಜನರಿಗೆ ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ಜಾತಿ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಮತ್ತಿತರ ದಾಖಲಾತಿಗಳನ್ನು ದೊರಕಿಸಿಕೊಡುವ ಆಂದೋಲನ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಲೆಕ್ಕಿಗರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.