ಸಂಪಾಜೆ, ಏ. ೧: ಕೊಡಗು ಸಂಪಾಜೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ತಾಲೂಕು ಸ್ತಿçÃಶಕ್ತಿ ಒಕ್ಕೂಟಗಳ ಸಹಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕಾರ್ಯಕ್ರಮ ಏರ್ಪಡಿಸಲಾಯಿತು.

ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲ ಭರತ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶೀಲಾ ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಇರ್ಷಾದ್, ಬಾಲ ಕಾರ್ಮಿಕ ಅಧಿಕಾರಿ ಶಿರಾಜ್ ಅಹಮ್ಮದ್, ಸ್ತಿçà ಶಕ್ತಿ ತಾಲೂಕು ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ, ತಾಲೂಕು ಸದಸ್ಯೆ ರೂಪಾ ರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾಮ ಪಂಚಾಯಿತಿ ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ ಮತ್ತು ಕುಮಾರ್ ಚೆದ್ಕಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಅರಣ್ಯ ಶಾಸ್ತç ಎಂಎಸ್ಸಿಯಲ್ಲಿ ವಿಶ್ವವಿದ್ಯಾನಿಲಯದ ಚಿನ್ನದ ಪದಕವನ್ನು ಪಡೆದಿರುವ ಸಂಪಾಜೆ ಗ್ರಾಮದ ಮಂಗಳಪಾರೆ ಶೋಭಾ ನಾರಾಯಣ ಅವರ ಪುತ್ರ ಅಶ್ವಥ್ ಎಂ.ಎನ್. ಇವರಿಗೆ ಸನ್ಮಾನಿಸಲಾಯಿತು.

ಸಮಾರಂಭವನ್ನು ಸಂಪಾಜೆ ಗ್ರಾಮದ ಎಲ್ಲಾ ಆಂಗನವಾಡಿ ಕಾರ್ಯಕರ್ತೆಯರು ನಡೆಸಿಕೊಡುವುದರೊಂದಿಗೆ ಸಂಪಾಜೆ ಗ್ರಾಮದ ಎಲ್ಲಾ ಸ್ತಿçÃಶಕ್ತಿ ಗುಂಪಿನ ಸದಸ್ಯರು, ಪಂಚಾಯಿತಿ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.