ಸೋಮವಾರಪೇಟೆ, ಏ. ೧: ಸಮೀಪದ ಕಲ್ಕಂದೂರು ಗ್ರಾಮದ ಜಂಕ್ಷನ್ನಲ್ಲಿ ಮೋರಿ ಕಾಮಗಾರಿ ಅಪೂರ್ಣಗೊಂಡಿರುವುದರಿAದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಮೂಲಕ ರಸ್ತೆಯನ್ನು ಅಗೆದು ಮೋರಿ ಅಳವಡಿಸಿ ಮೇಲ್ಭಾಗ ಮಣ್ಣು ಮುಚ್ಚಿದ್ದು, ಅಕ್ಕಪಕ್ಕದಲ್ಲಿ ನೀರು ಸರಾಗವಾಗಿ ಹರಿಯಲು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ನಡೆದಾಡಲೂ ಕಷ್ಟಕರವಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ತಿಳಿಸಿದ್ದರೂ ನಿರ್ಲಕ್ಷö್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ರಾಜ್ಯ ಹೆದ್ದಾರಿಯಲ್ಲಿ ಇಂತಹ ಸಮಸ್ಯೆ ಉದ್ಭವಿಸಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗಿದೆ. ತಕ್ಷಣ ಪಿಡಬ್ಲೂö್ಯಡಿ ಅಧಿಕಾರಿಗಳು ಚರಂಡಿ ದುರಸ್ತಿಗೆ ಕ್ರಮ ವಹಿಸಬೇಕೆಂದು ಸ್ಥಳೀಯರಾದ ಸಲಾಂ, ನಾಗರಾಜು, ಸಂದೀಪ್, ಅಜೀಜ್ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.