ಮಡಿಕೇರಿ ಏ.೧: ಪ್ರಸಕ್ತ ಸಾಲಿಗೆ ಅಗತ್ಯವಾಗಿ ಬೇಕಿರುವ ರಸಗೊಬ್ಬರ ದಾಸ್ತಾನಿಗೆ ಅಗತ್ಯ ಕ್ರಮವಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ನಿರ್ದೇಶನ ನೀಡಿದರು.
ನಗರದ ಜಿ.ಪಂ.ಸಭಾAಗಣದಲ್ಲಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಕಳೆದ ಬಾರಿ ರಸಗೊಬ್ಬರ ಎಷ್ಟು ಪೂರೈಕೆಯಾಗಿತ್ತು, ಕೊರತೆ ಏನಾದರೂ ಕಂಡುಬAದಿತ್ತೆ. ಮತ್ತಿತರ ಅಂಶವನ್ನು ಗಮನದಲ್ಲಿಟ್ಟುಕೊಂಡು, ಯೂರಿಯಾ ಸೇರಿದಂತೆ ಎಲ್ಲಾ ರೀತಿಯ ರಸಗೊಬ್ಬರವನ್ನು ದಾಸ್ತಾನು ಮಾಡಲು ಮುಂದಾಗುವAತೆ; ಅಲ್ಪಾವಧಿ ಬೆಳೆ ಬೆಳೆಯಲು ಕೃಷಿಕರಲ್ಲಿ ಉತ್ತೇಜನ ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರAಜನ್, ಕಳೆದ ವರ್ಷ ಕಾಫಿ ಮತ್ತು ಕರಿಮೆಣಸಿಗೆ ಹೊಡೆತ ಉಂಟಾಯಿತು. ಮುಂದಿನ ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆಯ ಮುನ್ಸೂಚನೆ ಸಂಬAಧಿಸಿದAತೆ ಕೃಷಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಶಾಸಕರು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇದೆ ಎಂದು ಕೆಡಿಪಿ ಸಭೆ ಸಮಿತಿ ಸದಸ್ಯ ಗಮನ ಸೆಳೆದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್ ಅವರು ಜಿಲ್ಲೆಯಲ್ಲಿ ೨೫ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಹಾಗೆಯೇ ರೈತ ವಿದ್ಯಾನಿಧಿ ಯೋಜನೆಯಡಿ ೩,೫೪೮ ವಿದ್ಯಾರ್ಥಿಗಳಿಗೆ ೧.೯ ಕೋಟಿ ರೂ. ಭರಿಸಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಕೃಷಿ ಕಾರ್ಯಕ್ರಮಗಳಾದ ಪ್ರಧಾನಮಂತ್ರಿ ಪಸಲ್ ಭೀಮಾ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ ಹೀಗೆ ಹಲವು ಕಾರ್ಯಕ್ರಮ ತಲುಪಿಸುವಂತೆ ಹೇಳಿದರು.
ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ತಾಲೂಕು ಮಟ್ಟದಲ್ಲಿ ರಸಗೊಬ್ಬರ ಮಾರಾಟಗಾರರ ಸಭೆನಡೆಸಿ ಪ್ರಸಕ್ತ ಸಾಲಿಗೆ ಬೇಕಿರುವ ರಸಗೊಬ್ಬರ ದಾಸ್ತಾನಿಗೆ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಬೇಡಿಕೆ ಇರುವ ಭತ್ತ ಬಿತ್ತನೆ ಬೀಜವನ್ನು ಪೂರೈಸಬೇಕು. ಬೇಡಿಕೆ ಇರುವುದನ್ನು ತರಿಸಿಕೊಳ್ಳಲು ಮುಂದಾಗುವAತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಬೇಡಿಕೆ ಇರುವ ರಸಗೊಬ್ಬರವನ್ನು ದಾಸ್ತಾನು ಮಾಡಿಕೊಂಡು ಪೂರೈಸಬೇಕು ಎಂದು ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿನ ಅರವಳಿಕೆ ತಜ್ಞರನ್ನು ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕು ಆಸ್ಪತ್ರೆಗೆ ನಿಯೋಜಿಸುವಂತೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆಯಿರುವುದರಿಂದ ಜಿಲ್ಲಾಸ್ಪತ್ರೆಯಲ್ಲಿ ಇರುವ ವೈದ್ಯರನ್ನು ವಾರದಲ್ಲಿ ಒಂದು ದಿನವಾದರೂ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ನಿಯೋಜಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಮತ್ತು ಕೆ.ಜಿ.ಬೋಪಯ್ಯ ಸಲಹೆ ನೀಡಿದರು.
ಸುಂಟಿಕೊಪ್ಪ, ಸೂರ್ಲಬ್ಬಿ, ಶನಿವಾರಸಂತೆ, ಕುಟ್ಟ, ನಾಪೋಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾಹಿತಿ ನೀಡಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ೯೪ಸಿ ನಡಿ ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ.೫೦ ರಷ್ಟು ತಿರಸ್ಕೃತಗೊಂಡಿವೆ. ಇದಕ್ಕೆ ಕಾರಣವೇನು ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಡವರಿಗೆ ವಿಶೇಷ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಮಾಡುತ್ತಿರುವುದಾದರೂ ಏನು, ಬಡವರಿಗೆ ಸಾಮಾಜಿಕ ನ್ಯಾಯ ದೊರಕಿಸುವುದು ಹೇಗೆ ಎಂದು ಸಿಟ್ಟಾದರು. ಇದಕ್ಕೆ ಧ್ವನಿಗೂಡಿಸಿದ ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್ ಅವರು ಬಡವರು, ಕೂಲಿ ಕಾರ್ಮಿಕರ ಹೊಟ್ಟೆ ಹೊಡೆಯಲು ಹೋಗಬೇಡಿ, ಬಡವರಿಗೆ ಸೌಲಭ್ಯಗಳನ್ನು ತಲುಪಿಸಲು ಮುಂದಾಗಿ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಈ ಬಗ್ಗೆ ಪ್ರಧಾನ ಕಾರ್ಯದರ್ಶಿ ಅವರಿಂದ ವಿಡಿಯೋ ಸಂವಾದ ನಡೆಸಿದ್ದು, ಎಲ್ಲಾ ಕಡುಬಡವರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಪೌತಿಖಾತೆಗೆ ಸಂಬAಧಿಸಿದAತೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಪ್ರತೀ ಕುಟುಂಬಕ್ಕೂ ವೈಯಕ್ತಿಕವಾಗಿ ಕಂದಾಯ ನಿಗಧಿ ಮಾಡಿ, ಖಾತೆ ಮಾಡಬೇಕು. ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕರ್ನಾಟಕ ಕಂದಾಯ ಕಾಯ್ದೆ ಅನುಷ್ಠಾನಗೊಳಿಸುವಂತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು.
ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಪಟ್ಟೆದಾರ ಪದ್ಧತಿ ಸಂಬAಧಿಸಿದAತೆ ಅವರವರ ಕುಟುಂಬದಲ್ಲಿ ಉಳಿಸಿಕೊಂಡಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಭೂಮಿ ಅನುಭವಿಸುವವರಿಗೆ ವೈಯಕ್ತಿಕ ಖಾತೆ ಮಾಡಿಕೊಡಬೇಕು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ‘ಪೌತಿಖಾತೆ ಸೇರಿದಂತೆ ಭೂಮಿಗೆ ಸಂಬAಧಿಸಿದAತೆ ಹಲವು ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಉಪವಿಭಾಗಾಧಿಕಾರಿ ನಿಯೋಜಿಸುವಂತಾಗಬೇಕು. ಜೊತೆಗೆ ಸರ್ಕಾರಿ ಸರ್ವೇಯರ್‌ಗಳ ನೇಮಕ ಮಾಡಬೇಕು ಎಂದು ಕೋರಿದರು.’
ನೆಲ್ಯಹುದಿಕೇರಿ ಬಳಿ ಕಾವೇರಿ ನದಿ ಪಾತ್ರದ ಹೊಳೆ ಬದಿ ವಾಸ ಮಾಡುತ್ತಿರುವವರಿಗೆ ಪರ್ಯಾಯ ಜಾಗ ಗುರುತಿಸಿ ಮನೆ ನಿರ್ಮಿಸಿಕೊಡುವ ಬಗ್ಗೆ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರು ಗಮನ ಸೆಳೆದರು.
‘ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಕೆಡಿಪಿ ಸಭೆ ನಡೆಸಲಾಗುವುದು. ತಾಲೂಕು ಮಟ್ಟದ ಅಧಿಕಾರಿಗಳ ಜೊತೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ನಿಖರ ಮಾಹಿತಿ ಪಡೆದು ಸಭೆಗೆ ಹಾಜರಾಗಬೇಕು. ಅಭಿವೃದ್ಧಿ ಕಾರ್ಯಕ್ಕೆ ಪ್ರತಿಯೊಬ್ಬ ಅಧಿಕಾರಿಯೂ ಕೈಜೋಡಿಸಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ನಿರ್ದೇಶನ ನೀಡಿದರು.’
ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಉಪ ಕಾರ್ಯದರ್ಶಿ ಪಿ.ಲಕ್ಷಿö್ಮ, ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್ ಇತರರು ಇದ್ದರು.