ವೀರಾಜಪೇಟೆ, ಏ. ೧: ವೀರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಉತ್ತಮ ಸಾಧನೆಯನ್ನು ತೋರಿದ್ದಾರೆ.

ಹ್ಯಾಂಡ್ ಬಾಲ್‌ನಲ್ಲಿ ದ್ವಿತೀಯ ಸ್ಥಾನಗಳಿಸಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಈ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ವಿದ್ಯಾರ್ಥಿನಿಯರಾದ ದೀಕ್ಷಿತಾ ಹಾಗೂ ತುಷಾಲಿ ಇವರು ತಿರುಚಿನಾಪಳ್ಳಿಯ ಭಾರತಿ ದಾಸನ್ ಯೂನಿವರ್ಸಿಟಿ ಚೆನ್ನೆöÊನಲ್ಲಿ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಒಟ್ಟು ೪೦ ತಂಡಗಳು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ ಪ್ರಥಮ ಬಿ.ಎಸ್ಸಿ. ವಿದ್ಯಾರ್ಥಿನಿ ಡಿವಿನ ಸಾಲ್ಡಾನ್ಹಾ ಉತ್ತಮ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಿ.ವಿ. ರಾಜರೈ ವಿದ್ಯಾರ್ಥಿ ಗಳನ್ನು ತರಬೇತುಗೊಳಿಸಿದ್ದರು.

ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್ ಅವರ ಸಲಹೆ ಹಾಗೂ ಮಾರ್ಗದರ್ಶನದ ಮೂಲಕ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.