ಮಡಿಕೇರಿ, ಏ. ೧: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿಯನ್ನು ಗೋಣಿಕೊಪ್ಪ ಕಾವೇರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನ್ವಿತ್‌ಕುಮಾರ್ ಪಡೆದುಕೊಂಡಿದ್ದಾನೆ.

ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಸಾಧಾರಣ ಸಾಧನೆಯನ್ನು ಗುರುತಿಸಿ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಅನ್ವಿತ್‌ಕುಮಾರ್ ವಿಷ್ಣುಮೂರ್ತಿ ಹಾಗೂ ಚಂದ್ರಕಲಾ ದಂಪತಿ ಪುತ್ರ.