ಮಡಿಕೇರಿ, ಏ. ೧: ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ ೨೦೨೧-೨೨ನೇ ಸಾಲಿನ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-೩ ಬಿ ಯಲ್ಲಿ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಟ ೧ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತೀ ಸಣ್ಣ ರೈತರಾಗಿದ್ದು, ವಾರ್ಷಿಕ ವರಮಾನ ರೂ. ೪೦ ಸಾವಿರಗಳ ಮಿತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಟ ೧೮ ವರ್ಷಗಳು ಹಾಗೂ ಗರಿಷ್ಠ ೫೫ ವರ್ಷಗಳ ಮಿತಿಯೊಳಗಿರಬೇಕು. ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ರೂ. ೨.೫೦ ಲಕ್ಷ ನಿಗದಿಪಡಿಸಿದ್ದು, ಇದರಲ್ಲಿ ರೂ. ೨ ಲಕ್ಷ ಸಹಾಯಧನ ಹಾಗೂ ರೂ. ೫೦ ಸಾವಿರಗಳ ಶೇ. ೪ ರ ಬಡ್ಡಿ ದರದಲ್ಲಿ ಸಾಲ ಒಳಗೊಂಡಿರುತ್ತದೆ.
ಜೀವಜಲ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯಿತ ಸಮುದಾಯದ ಫಲಾಫೇಕ್ಷಿಗಳು ನಿಗಮದ ವೆಬ್ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಬಹುದು. ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಾಡ್ರಿಗಸ್ ಕಟ್ಟಡದ ಎದುರು, ರೇಸ್ ಕೋರ್ಸ್ ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ ೨೫ ರೊಳಗೆ ಕಚೇರಿಗೆ ಸಲ್ಲಿಸುವುದು ಮತ್ತು ಹೆಚ್ಚಿನ ವಿವರಗಳಿಗೆ ದೂ.ಸಂ.೦೮೨೭೨-೨೨೧೬೫೬ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.