ಮಡಿಕೇರಿ, ಏ. ೧: ವೃತ್ತಿಪರ ಶಿಕ್ಷಣ (ಪ್ರೊಫೆಷನಲ್ ಕೋರ್ಸ್) ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿAದ ಪ್ರಧಾನ ಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಮಾರ್ಚ್ ೩೧ ಕೊನೆಯ ದಿನವಾಗಿತ್ತು. ಆದರೆ ೨೦೨೧-೨೨ನೇ ಸಾಲಿನ ಪ್ರವೇಶ ಪ್ರಕ್ರಿಯೆಗಳು ವಿಳಂಬವಾಗಿರುವ ಕಾರಣ ಏಪ್ರಿಲ್ ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ಸೈನಿಕ ಮಂಡಳಿಯು ಘೋಷಿಸಿದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.ಏSಃ. ಉಔಗಿ.Iಓ ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.