ಮಡಿಕೇರಿ, ಏ.೧: ಕರ್ನಾಟಕ ರಾಜ್ಯ ಪೊಲೀಸ್, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ. ೨ ರಂದು (ಇಂದು) ಬೆಳಗ್ಗೆ ೮.೩೦ ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮ ನಡೆಯಲಿದೆ.
ನಿವೃತ್ತ ಮಹಿಳಾ ಎ.ಎಸ್.ಐ ಮೇರಿ ಇಮಾಕ್ಯುಲೇಟ್ ಎ., ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎಂ.ಎ.ಅಯ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.