*ಗೋಣಿಕೊಪ್ಪ, ಏ. ೧: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವತಿ ಯಿಂದ ಗೃಹೋತ್ಪನ್ನ ಮಾರಾಟ ಸಂತೆ ಮೇಳ ನಡೆಯಿತು.
ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರು ತಯಾರಿಸಿದ ಪದಾರ್ಥಗಳಾದ ಮಸಾಲೆ ಪುಡಿ, ವೈನ್, ಉಪ್ಪಿನಕಾಯಿ, ಪೆನಾಯಿಲ್, ಸೋಪು ಪುಡಿ, ತರಕಾರಿಗಳು, ಬಟ್ಟೆಗಳು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡುವ ಮೂಲಕ ಆರ್ಥಿಕ ಸಬಲತೆಗೆ ಪ್ರಯತ್ನಿಸಿದರು. ಕಾರ್ಯಕ್ರಮವನ್ನು ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಉದ್ಘಾಟಿಸಿದರು.
ಜಿಲ್ಲಾ ವ್ಯವಸ್ಥಾಪಕ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು, ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಜಿಲ್ಲಾ ಮಹಿಳಾ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಸಂಯೋಜಕರು ಜಿಲ್ಲಾ ಮಹಿಳಾ ಶಕ್ತಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಒಕ್ಕೂಟದ ಅಧ್ಯಕ್ಷರು ಇತರರು ಸಂತೆಯಲ್ಲಿ ವಿವಿಧ ವಸ್ತುಗಳನ್ನು ಖರೀದಿಸಿ ಒಕ್ಕೂಟದ ಬಲವರ್ಧನೆಗೆ ಸಹಕಾರ ನೀಡಿದರು.