ಸೋಮವಾರಪೇಟೆ, ಏ. ೧: ಸಮೀಪದ ನೇರುಗಳಲೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆನೀಡಿದರು. ಎಸ್ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸಂಭ್ರಮ್, ಹೆಚ್.ಆರ್. ಪ್ರಕಾಶ್, ಪೋಷಕರ ಸಮಿತಿಯ ಅಧ್ಯಕ್ಷ ರಾಜಣ್ಣ, ಲಲಿತ ಹಾಗೂ ಆಟೋ ಚಾಲಕಿ ಪ್ರಮೀಳಾ, ಪ್ರಮುಖರಾದ ರವಿಕುಮಾರ್, ಮುಖ್ಯಶಿಕ್ಷಕಿ ತಂಗಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.