ಮಡಿಕೇರಿ, ಏ.೧ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹಾಗೂ ಸದಸ್ಯರುಗಳು ತಾ. ೫ ರಿಂದ ೭ ರವರೆಗೆ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅಧ್ಯಕ್ಷರು ಹಾಗೂ ಸದಸ್ಯರುಗಳು ತಾ. ೫ ರಂದು ಬೆಳಗ್ಗೆ ೧೧ ಗಂಟೆಗೆ ಕಕ್ಕಬ್ಬೆ ಗ್ರಾ.ಪಂ. ವ್ಯಾಪ್ತಿಯ ಅರಮನೆ ಬಳಿ ವಾಸವಿರುವ ಕೊಡಗು ಕಾಪಾಳ ಸಮುದಾಯದವರ ಭೇಟಿ ಹಾಗೂ ಅವರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಮಧ್ಯಾಹ್ನ ೨.೩೦ ಗಂಟೆಗೆ ದೊಡ್ಡ ಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಗೆಕೋಡಿ ಗ್ರಾಮ ಮತ್ತು ಕಿರಿಕೊಡ್ಲಿ ಗ್ರಾಮದಲ್ಲಿ ವಾಸವಿರುವ ಲಿಂಗಾಯಿತ ಪಂಚಮಸಾಲಿ ಸಮುದಾಯದವರ ಭೇಟಿ ಮಾಡಿ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತು ಸ್ಥಳ ಪರಿಶೀಲನೆ ಮಾಡಲಿದ್ದಾರೆ.

ತಾ. ೬ ರಂದು ಬೆಳಗ್ಗೆ ೧೧ ಗಂಟೆಯಿAದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ತಾಲೂಕು ತಹಶೀಲ್ದಾರರು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಹಿಂದುಳಿದ ಅಭಿವೃದ್ಧಿ ನಿಗಮದ ಅಧಿಕಾರಿಗಳ ಜೊತೆಗೆ ಹಾಗೂ ಜಿಲ್ಲಾ ಮುಖ್ಯ ಎಂಜಿನಿಯರ್ ವಿದ್ಯುತ್ ನಿಗಮ ಮಂಡಳಿ ಅವರ ಜೊತೆಗೆ ಗಂಗಾ ಕಲ್ಯಾಣ ಯೋಜನೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನೆ, ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ ೩.೩೦ ಗಂಟೆಗೆ ಮಡಿಕೇರಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ- ವಿದ್ಯಾರ್ಥಿ ನಿಲಯಗಳ ಭೇಟಿ ಮಾಡಿ ಪರಿಶೀಲನೆ ಮಾಡಲಿದ್ದಾರೆ. ತಾ. ೭ ರಂದು ಬೆಳಗ್ಗೆ ೧೧.೩೦ ಗಂಟೆಗೆ ಕದನೂರು ಪಂಚಾಯತ್ ಅರಮೇರಿ ಗ್ರಾಮದ ಅರಮೇರಿ ಕಳಂಚೇರಿ ಮಠ ಪಂಚಮಸಾಲಿ ಮಲೆಗೌಡ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಆಪ್ತ ಸಹಾಯಕರು ತಿಳಿಸಿದ್ದಾರೆ.