ಮಡಿಕೇರಿ, ಏ. ೩: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ೨೦೨೧-೨೨ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ (ಎಸ್‌ಎಸ್‌ಪಿ) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎನ್‌ಎಸ್‌ಪಿಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಎಸ್‌ಎಸ್‌ಪಿ ಪೂರ್ಟಲ್ hಣಣಠಿs://ssಠಿ. ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ರಿನೀವಲ್ ಮತ್ತು ಪ್ರೆಸ್‌ರ್) ಕಡ್ಡಾಯವಾಗಿದ್ದು ಅರ್ಜಿ ಸಲ್ಲಿಸಲು ಏಪ್ರಿಲ್ ೩೦ ಕೊನೆಯ ದಿನವಾಗಿದೆ.

ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://ಜom. ಞಚಿಡಿಟಿಚಿಣಚಿಞಚಿ.gov.iಟಿ/ಞoಜಚಿgu/ಠಿubಟiಛಿ ಅಥವಾ ಸಹಾಯವಾಣಿ ಸಂಖ್ಯೆ ೮೨೭೭೭೯೯೯೯೦ಗೆ ಅಥವಾ ತಾಲೂಕು ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು.

ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ: ೫೭೧೨೦೧. ದೂ. ೦೮೨೭೨-೨೨೫೫೨೮/ ೨೨೦೨೧೪. ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯಿತಿ ಕಚೇರಿ ಪೊನ್ನಂಪೇಟೆ, ವೀರಾಜಪೇಟೆ ತಾಲೂಕು ದೂ. ೯೯೦೦೭೩೧೦೩೭. ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯಿತಿ ಕಟ್ಟಡ, ಸೋಮವಾರ ಪೇಟೆ, ದೂ. ೮೫೪೮೦೬೮೫೧೯ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಮತ ಅವರು ತಿಳಿಸಿದ್ದಾರೆ.