ಕುಶಾಲನಗರ, ಏ. ೩: ರಾಜ್ಯದಲ್ಲಿ ಬಿ.ಜೆ.ಪಿ ಸರಕಾರ ಮತ್ತು ಸಂಘಪರಿವಾರ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.

ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ದ ಘೋಷಣೆ ಕೂಗಿದರು.

ಕರ್ನಾಟಕದಲ್ಲಿ ಜಾತಿ-ಜಾತಿಗಳ, ಧರ್ಮಗಳ ನಡುವೆ ದ್ವೇಷವನ್ನು ಬಿತ್ತಿ ಜನರ ನಡುವೆ ಸಂಘರ್ಷ ಸೃಷ್ಟಿ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶÀ ವ್ಯಕ್ತಪಡಿಸಿದರು.

ಹಲಾಲ್ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಶಾಂತಿ, ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಿಸುವವರ ಮೇಲೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯ ಕಬೀರ್, ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಉಸ್ಮಾನ್, ಸುಂಟಿಕೊಪ್ಪ, ನಗರ ಅಧ್ಯಕ್ಷ ಬಾಷಾ, ಪ್ರಮುಖರಾದ ಆಬಿದ್, ಸಾಜಿದ್, ಜಕ್ರಿಯ, ಹನೀಫ, ಮುಜೀಬ್ ಇದ್ದರು.