ಬೆಂಗಳೂರು, ಏ. ೩: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ತಾ. ೪ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ.
ಬೆಳಿಗ್ಗೆ ೧೧ ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್‌ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ಮಧ್ಯಾಹ್ನ ೧ ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿದುಬಂದಿದೆ.
ಅರ್ಥಶಾಸ್ತç ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, ೧೯೯೦ ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊAಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. ಅಲ್ಲದೆ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಬಾಸ್ಕರ್ ರಾವ್ ಸೇವೆ ಸಲ್ಲಿಸಿದ್ದಾರೆ.