ಗೋಣಿಕೊಪ್ಪ ವರದಿ, ಏ. ೩: ಇಲ್ಲಿನ ೬ ನೆ ವಿಭಾಗದ ರಸ್ತೆ ಬದಿಯಲ್ಲಿ ಅಪರಿಚಿತ ಗಂಡಸಿನ ಶವ ಶನಿವಾರ ಪತ್ತೆಯಾಗಿದೆ. ೫೫ ರಿಂದ ೬೦ ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದ್ದು, ವಾರಸುದಾರರು ಇದ್ದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.