ನಾಪೋಕ್ಲು, ಏ. ೩: ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟಿರ ವಿನಯ್ ಮಾತನಾಡಿ, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮುನ್ನಡೆಯಬೇಕು ಎಂದರು.

ನೇತಾಜಿ ಪ್ರೌಢಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಬದ್ದಂಜೆಟ್ಟೀರ ದೇವಿ ದೇವಯ್ಯ, ಬೊಟ್ಟೊಳಂಡ ಗಿರೀಶ್, ವರುಣ್ ಸುಬ್ಬಯ್ಯ, ಪಾಲ್ಗೊಂಡಿದ್ದರು. ಈ ಸಂದರ್ಭ ೨೦೨೦-೨೧ರ ಸಾಲಿನಲ್ಲಿ ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯಲ್ಲಿ ಅತ್ಯಧಿಕ ಅಂಕಗಳಿಸಿ ಶಾಲೆಗೆ ಕೀರ್ತಿ ತಂದ ಎಸ್. ಮಂಜುಳ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದ ಅಂಗವಾಗಿ ಗಾಯಕ ವಿ.ಟಿ. ಶ್ರೀನಿವಾಸ್ ಅವರಿಂದ ಹಾಡುಗಾರಿಕೆ ನಡೆಯಿತು. ಮುಖ್ಯ ಶಿಕ್ಷಕ ಸಿ.ಎಸ್. ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕ ವೃಂದದವರು ಹಾಜರಿದ್ದರು.