ಮಡಿಕೇರಿ, ಏ.೩: ಕೊಡಗು ಜಿಲ್ಲಾ ಪೊಲೀಸ್ ವಿಭಾಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ಶನಿವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ನಿವೃತ್ತ ಮಹಿಳಾ ಎಎಸ್‌ಐ ಮೇರಿ ಇಮಾಕ್ಯುಲೇಟ್.ಎ ಅವರು ಪಥಸಂಚಲನ ಪರಿವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದ ನಂತರ ಮಾತನಾಡಿ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಡುವೆ ಉತ್ತಮ ಬಾಂಧವ್ಯ ಇರಬೇಕು. ನಿಷ್ಠೆ, ಬದ್ಧತೆ, ಪ್ರಾಮಾಣಿಕತೆ ಇದ್ದಲ್ಲಿ ಉತ್ತಮ ಸೇವೆ ಸಲ್ಲಿಸಬಹುದು ಎಂದು ಅವರು ಹೇಳಿದರು. ಪೊಲೀಸರು ಪ್ರತಿನಿತ್ಯ ಸಾರ್ವಜನಿಕ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯೇ ಪ್ರಮುಖ ಎಂಬುದನ್ನು ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಡಿಸಿಆರ್‌ಬಿ ವಿಭಾಗದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಎನ್.ನಿರAಜನ್ ಅವರಿಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಿಸಿ ಮಾತನಾಡಿ ಪೊಲೀಸ್ ಇಲಾಖೆಯ ಸೇವೆ ಶ್ಲಾಘನೀಯ. ಸಮಾಜಮುಖಿಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ಸ್ವಾಗತಿಸಿ ಮಾತನಾಡಿ ಪೊಲೀಸರ ಸೇವೆ, ಶೌರ್ಯ, ಅರ್ಪಣಾ ಮನೋಭಾವವನ್ನು ಗೌರವಿಸುವ ಹಾಗೂ ಪುರಸ್ಕರಿಸುವ ನಿಟ್ಟಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು. ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಎಂದು ಅವರು ಹೇಳಿದರು.
ಉತ್ತಮ ಸೇವೆ ಸಲ್ಲಿಸಿದ ಪೊಲೀಸರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಆರ್‌ಪಿಐ ಚೆನ್ನನಾಯಕ್ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ನಿವೃತ್ತ ಡಿಸಿಪಿ ಪೂಣಚ್ಚ, ನಿವೃತ್ತ ಪೊಲೀಸ್ ಅಧೀಕ್ಷಕರಾದ ಎ.ಕೆ.ಸುರೇಶ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಗಜೇಂದ್ರ ಪ್ರಸಾದ್, ಜಯಕುಮಾರ, ಶೈಲೇಂದ್ರ, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು. ಆಂಟೋನಿ ಡಿಸೋಜ ನಿರೂಪಿಸಿದರು. ನಿವೃತ್ತ ಪೊಲೀಸ್ ಅಧೀಕ್ಷಕರಾದ ಅಪ್ಪಯ್ಯ ವಂದಿಸಿದರು.