ಗುಡ್ಡೆಹೊಸೂರು, ಏ. ೪: ಗುಡ್ಡೆಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವನಹಳ್ಳಿ, ಆನೆಕಾಡು ವಿಭಾಗದಲ್ಲಿ ರಸ್ತೆಯ ನಡುವೆ ಜಾನುವಾರುಗಳು ಸಂಚರಿಸುತ್ತಿದ್ದು, ಈ ಕಾರಣದಿಂದ ರಸ್ತೆಯಲ್ಲಿ ವಾಹನಗಳ ನಡುವೆ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇಂದು ಮುಂಜಾನೆ ರಸ್ತೆ ಅಪಘಾತದಲ್ಲಿ ಜಾನುವಾರು ಸಾವನ್ನಪ್ಪಿ ರಸ್ತೆಯ ಬದಿಯಲ್ಲಿ ಬಿದ್ದಿದ್ದರೂ, ಸ್ಥಳೀಯ ಗ್ರಾಮ ಪಂಚಾಯ್ತಿ ಅದನ್ನು ತೆರವುಗೊಳಿಸದಿರುವ ಬಗ್ಗೆ ಬಸವನಹಳ್ಳಿ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ದನಗಳನ್ನು ಹೆದ್ದಾರಿಯಲ್ಲಿ ಬಿಡದಂತೆ ಸಂಬAಧಿಸಿದವರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ರಸ್ತೆಯಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿವೆೆ ಎಂದು ಅಲ್ಲಿನ ನಿವಾಸಿ, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಮಹೇಂದ್ರ ಆಗ್ರಹಿಸಿದ್ದಾರೆ. ರಸ್ತೆಯಲ್ಲಿ ಕಂಡುಬರುವ ಜಾನುವಾರುಗಳನ್ನು ಗೋಶಾಲೆಗೆ ಕಳುಹಿಸುವ ಕಾರ್ಯವನ್ನು ಗ್ರಾಮ ಪಂಚಾಯ್ತಿ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.