ಕುಶಾಲನಗರ, ಏ. ೪: ಕುಶಾಲನಗರ ರೋಟರಿ ಮತ್ತು ಆಪ್ಟೆಕ್ ಸಂಸ್ಥೆಯ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ - ಯುವತಿಯರಿಗೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.
ಅವರು ಕುಶಾಲನಗರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿರುದ್ಯೋಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಯುವಕ-ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಕನಿಷ್ಟ ೧೦ನೇ ತರಗತಿ ತೇರ್ಗಡೆ ಹೊಂದಿರಬೇಕು. ಪಿಯುಸಿ ಮತ್ತು ಪದವಿ ಹೊಂದಿದ ೨೫ ಯುವಕ-ಯುವತಿಯರಿಗೆ ತರಬೇತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಕನಿಷ್ಟ ನೋಂದಣಿ ಶುಲ್ಕ ಪಾವತಿಸಬೇಕು. ತರಬೇತಿ ಶುಲ್ಕವನ್ನು ರೋಟರಿ ಸಂಸ್ಥೆ ಭರಿಸುತ್ತದೆ ಎಂದು ಅವರು ಹೇಳಿದರು.
ಅರ್ಹ ಯುವಕ-ಯುವತಿಯರು ಸ್ವಯಂ ಲಿಖಿತ ಅರ್ಜಿಯನ್ನು ರೋಟರಿ ಅಧ್ಯಕ್ಷರಿಗೆ ಸಲ್ಲಿಸಬಹುದು. ವಿದ್ಯಾಭ್ಯಾಸದ ಅಂಕಪಟ್ಟಿ ಎರಡು ಭಾವಚಿತ್ರ ಆಧಾರ್ ಕಾರ್ಡ್ ಪ್ರತಿಯನ್ನು ತಾ. ೧೦ರೊಳಗಾಗಿ ಕುಶಾಲನಗರದ ಕಂಪ್ಯೂಟರ್ ಕೇಂದ್ರಕ್ಕೆ ಸಲ್ಲಿಸುವಂತೆ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ೯೪೪೮೦೮೨೬೧೯, ೯೪೪೮೦೭೯೧೧೫ ಅನ್ನು ಸಂಪರ್ಕಿಸುವAತೆ ತಿಳಿಸಿದ್ದಾರೆ.