ಮಡಿಕೇರಿ, ಏ.೪ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ರವರ ೧೧೫ ನೇ ಜನ್ಮ ದಿನಾಚರಣೆಯು ತಾ. ೫ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿಯಿರುವ ತಾಲೂಕು ಪಂಚಾಯಿತಿಯ ಎಸ್‌ಜೆಎಸ್‌ವೈ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ.