ಶನಿವಾರಸಂತೆ, ಏ. ೪: ಸಮೀಪದ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ವತಿಯಿಂದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಜಗದ್ಗುರು ರೇಣುಕಾಚಾರ್ಯರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಅರ್ಚಕ ಮೃತ್ಯುಂಜಯ ಹಿರೇಮಠ್ ಪೂಜಾ ವಿಧಿ ನೆರವೇರಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಕ್ಷಿತ್, ಉಪಾಧ್ಯಕ್ಷರಾದ ನಿತಿನ್, ರೇಖಾ ಆದರ್ಶ, ಕಾರ್ಯದರ್ಶಿ ಉಮೇಶ್, ರಾಜ್ಯ ಕಾರ್ಯದರ್ಶಿ ರಾಜೇಶ್ವರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಮತಾ, ಕಾರ್ಯದರ್ಶಿ ರಾಧಾ, ಪದಾಧಿಕಾರಿಗಳಾದ ನಾಗೇಶ್, ಪೂರ್ಣಿಮಾ, ಲಾವಣ್ಯ, ನಾಗೇಶ್, ಷಣ್ಮುಖಪ್ಪ, ನಿಶಾಂತ್ ಇತರರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜನ್ಮ ದಿನದ ಪ್ರಯುಕ್ತ ತಾಲೂಕಿನ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೊಡ್ಲಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಶನಿವಾರಸಂತೆಯ ಸಮುದಾಯ ಆರೋಗ್ಯ ಕೇಂದ್ರ, ಆಲೂರು ಸಿದ್ದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸೋಮವಾರಪೇಟೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಹಣ್ಣುಹಂಪಲು ವಿತರಿಸಲಾಯಿತು.