ಕೂಡಿಗೆ, ಏ. ೪: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮವು ತಾ. ೧೧ ರಂದು ದೇವಾಲಯದ ಆವರಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಗಣಪತಿ ಹೋಮ, ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಇತ್ಯಾದಿ ಪೂಜೆಗಳು, ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ, ಮತ್ತು ರಾತ್ರಿ ೭ ಗಂಟೆಗೆ ದೀಪಾಲಂಕಾರ ವಿಶೇಷ ಪೂಜೆ , ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ವಿಶೇಷ ಪೂಜೆಗಳು ನೆರವೇರಲಿವೆ.