*ಗೋಣಿಕೊಪ್ಪ, ಏ. ೫: ಹೊಸೂರು ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ ರತ್ನ ತಿಮ್ಮಯ್ಯ, ಗ್ರಾಮ ಹಿರಿಯ ಮಹಿಳೆ ಸರೋಜ ಗಿರಿಯಪ್ಪ ಹಾಗೂ ಚಿಟ್ಟೆ ಅಜ್ಜಿಯನ್ನು ಸನ್ಮಾನಿಸಲಾಯಿತು.

ಗ್ರಾ.ಪಂ. ಅಧ್ಯಕ್ಷೆ ಶಾಂತಿ ಸೋಮಯ್ಯ, ಸದಸ್ಯರಾದ ಸುಶೀಲಾ, ಪ್ರಕಾಶ್, ಗ್ರಾ.ಪಂ. ಮಾಜಿ ಸದಸ್ಯ ಕಾವೇರಮ್ಮ, ಪುಷ್ಪಾ, ಸಂಜೀವಿನಿ ತಾಲೂಕು ವ್ಯವಸ್ಥಾಪಕ ಯೋಗೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಒಕ್ಕೂಟದ ಕಾರ್ಯದರ್ಶಿ ಪ್ರಮೀಳಾ, ಬಿ.ಎಂ.ಕೆ. ಗಾಯಿತ್ರಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶೀಲಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.