ಮಡಿಕೇರಿ, ಏ. ೫: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ೫ ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಆನ್‌ಲೈನ್/ ವರ್ಚುವಲ್ ಮೂಲಕ ಜರುಗಿತು.

‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಿAದ ನೇರ ಪ್ರಸಾರದಲ್ಲಿ ಪರೀಕ್ಷೆಗೆ ಸಂಬAಧಿಸಿದAತೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿದರು.

ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ವೀಕ್ಷಣೆಗೆ ಶಾಲಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಯಿತು.

ಪಾಲಕರು, ಶಿಕ್ಷಕರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಮುಖ್ಯ ಘಟ್ಟವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಹಬ್ಬವಾಗಿ ಪರಿವರ್ತಿಸಬೇಕು ಎಂದು ಸಲಹೆ ನೀಡಿದರು.

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು. ಭಯವನ್ನು ತೊರೆದು ಪರೀಕ್ಷೆ ಬರೆಯಬೇಕು. ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಬಾರದು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಧ್ಯಾನದಿಂದ ಮರೆವಿನ ಸಮಸ್ಯೆಯನ್ನು ಮೆಟ್ಟಿ ನಿಲ್ಲಬಹುದಾಗಿದೆ. ಏಕಾಗ್ರತೆಯಿಂದ ಓದಿನ ಕಡೆ ಗಮನ ಹರಿಸಿ ಓದಿದರೆ, ಓದಿದ್ದು ಮರೆಯುವುದಿಲ್ಲ ಎಂದು ಪ್ರಧಾನಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳ ಆಸೆ ಆಕಾಂಕ್ಷೆಯನ್ನು ಅರಿಯಲು ಪ್ರಯತ್ನಿಸಬೇಕು. ಪಾಲಕರು, ಶಿಕ್ಷಕರು ತಮ್ಮ ಅಕಾಂಕ್ಷೆಗಳನ್ನು ಮಕ್ಕಳ ಮೇಲೆ ಹೇರಬಾರದು. ಜೊತೆಗೆ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ಮೀರಿ ಮಕ್ಕಳಿಗೆ ಸಾಧಿಸಲಾಗದನ್ನು ಅವರ ಮೇಲೆ ಹೇರಬಾರದು ಎಂದರು.

ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಪರೀಕ್ಷೆ ಫಲಿತಾಂಶದಲ್ಲಿಯೂ ಸಹ ಬಾಲಕಿಯರೇ ಮುಂದಿದ್ದಾರೆ. ಹೆಣ್ಣು ಮಕ್ಕಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದರು.

ಹೀಗೆ ಹಲವಾರು ಮಾಹಿತಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜೊತೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಹಂಚಿಕೊAಡರು. ಮಡಿಕೇರಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರ್ಜುನ್ ಸಿಂಗ್, ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.