ಮಡಿಕೇರಿ, ಏ. ೬: ತಾ. ೮ ರಂದು ರಾಜ್ಯ ಅರಣ್ಯ ಸಚಿವ ಉಮೇಶ್ ವಿಶ್ವನಾಥ್ ಕತ್ತಿ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ. ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆ ದಿನ ಮಧ್ಯಾಹ್ನ ೨ ಗಂಟೆಗೆ ಸಚಿವ ಉಮೇಶ್ ಕತ್ತಿ ಅವರ ಸಮ್ಮುಖದಲ್ಲಿ ಮಡಿಕೇರಿಯ ಜಿಲ್ಲಾ ಅರಣ್ಯ ಭವನದಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆನೆ ಹಾವಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ-ಮಾನವ ಸಂಘರ್ಷದ ಕುರಿತಾಗಿ ಚರ್ಚಿಸಲು ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಕೊಡಗಿನ ಕೃಷಿಕರು, ಬೆಳೆಗಾರರು, ನಾಗರಿಕರು ಪಾಲ್ಗೊಳ್ಳಬಹುದಾಗಿ ಮಡಿಕೇರಿ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಅವರು ತಿಳಿಸಿದ್ದಾರೆ.