ಪರಿಶಿಷ್ಟರಿಗೆ ೭೫ ಯೂನಿಟ್‌ವರೆಗೆ ಉಚಿತ ವಿದ್ಯುತ್-ಸಹಾಯಧನ ಹೆಚ್ಚಳ

ಬೆಂಗಳೂರು, ಏ. ೫: ಎಸ್‌ಸಿ, ಎಸ್‌ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ ರೂ. ೧೫ ಲಕ್ಷ ಸಹಾಯಧನವನ್ನು ೨೦ ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ೧೧೫ನೇ ಜನ್ಮದಿನಾಚರಣೆ ಹಾಗೂ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಎಸ್ಸಿ-ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ ೧,೭೫,೦೦೦ ರೂ.ಗಳ ಸಹಾಯಧನವನ್ನು ೨ ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು. ಸ್ವಯಂ ಉದ್ಯೋಗ ಮಾಡುವ ಎಸ್ಸಿ-ಎಸ್ಟಿ ಸಮುದಾಯಕ್ಕೆ ಪ್ರತಿ ತಾಲೂಕಿನಲ್ಲಿ ಬಾಬು ಜಗಜೀವರಾಂ ಸ್ವಯಂ ಉದ್ಯೋಗ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು. ಗ್ರಾಮೀಣ ಪ್ರದೇಶದಲ್ಲಿ ಕುಟೀರ ಯೋಜನೆಯಡಿ ಎಸ್ಸಿ ಎಸ್ಟಿ ಸಮುದಾಯದವರಿಗೆ ೭೫ ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಈ ಸಂಬAಧ ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶನ್ನು ಹೊರಡಿಸಲಾಗುವುದು ಎಂದು ಸಿಎಂ ತಿಳಿಸಿದರು. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ ನೀಡುವ ವಿನೂತನ ಯೋಜನೆಯನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು. ‘ಮುಖ್ಯಮಂತ್ರಿ ಮಾರ್ಗದರ್ಶಿನಿ ವೇದಿಕೆಯ ಮೂಲಕ ೮ ರಿಂದ ೧೨ ವರೆಗಿನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಎಸ್ಸಿ-ಎಸ್ಟಿ ಸಮುದಾಯಗಳಿಗಾಗಿ ಸ್ಟಾರ್ಟ್ ಅಪ್ ಯೋಜನೆಯಡಿ ೫೦ ಲಕ್ಷ ರೂ.ಗಳ ಸಹಾಯಧನ ನೀಡುವ ಯೋಜನೆಯನ್ನು ಆಯವ್ಯಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪೆಟ್ರೋಲ್ ಬೆಲೆ ಶೇ. ೫ ರಷ್ಟು ಮಾತ್ರ ಹೆಚ್ಚಾಗಿದೆ: ಸಚಿವ

ನವದೆಹಲಿ, ಏ. ೫: ರಷ್ಯಾ-ಉಕ್ರೇನ್ ಯುದ್ಧದ ನಂತರ ಭಾರತದಲ್ಲಿ ಪೆಟ್ರೋಲ್ ಬೆಲೆ ಕೇವಲ ಶೇ. ೫ ರಷ್ಟು ಮಾತ್ರ ಹೆಚ್ಚಾಗಿದೆ. ಆದರೆ ಕೆಲವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪೆಟ್ರೋಲ್ ಬೆಲೆ ಶೇ. ೫೦ಕ್ಕಿಂತ ಹೆಚ್ಚಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ಉಕ್ರೇನ್ ಪರಿಸ್ಥಿತಿ ಕುರಿತು ಅಲ್ಪಾವಧಿಯ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪೆಟ್ರೋಲಿಯಂ ಸಚಿವರು, ಆಪರೇಷನ್ ಗಂಗಾ ಒಂದು ಸಾರಿಗೆ ಕಾರ್ಯಾಚರಣೆ ಅದು ಸ್ಥಳಾಂತರ ಕಾರ್ಯಾಚರಣೆ ಅಲ್ಲ ಎಂಬ ಪ್ರತಿಪಕ್ಷಗಳ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದರು. ಇದೇ ವೇಳೆ ಹೆಚ್ಚುತ್ತಿರುವ ಪೆಟ್ರೋಲ್ ಬೆಲೆಯನ್ನು ಉಲ್ಲೇಖಿಸಿದ ಸಚಿವರು, ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮ ಭಾರತದ ಮೇಲೆ ಮಾತ್ರ ಬೀರಿಲ್ಲ. ಇಡೀ ವಿಶ್ವ ಈ ಯುದ್ಧದ ಪರಿಣಾಮ ಅನುಭವಿಸುತ್ತಿದೆ ಎಂದು ಹೇಳಿದರು. ಯುದ್ಧದ ನಂತರ ಅಭಿವೃದ್ಧಿ ಹೊಂದಿದ ಮತ್ತು ಇತರ ಅಭಿವೃದ್ಧಿಶೀಲ ರಾಷ್ಟçಗಳಲ್ಲಿ ಪೆಟ್ರೋಲ್ ಬೆಲೆ ಹಲವು ಪಟ್ಟು ಹೆಚ್ಚಲವಾಗಿದೆ. ಅವುಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಬೆಲೆಯಲ್ಲಿನ ಹೆಚ್ಚಳವು ತುಂಬಾ ಕಡಿಮೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಅಮೇರಿಕಾ, ಬ್ರಿಟನ್, ಕೆನಡಾ, ಜರ್ಮನಿ ಮತ್ತು ಶ್ರೀಲಂಕಾದAತಹ ದೇಶಗಳಲ್ಲಿ ಪೆಟ್ರೋಲ್ ಬೆಲೆ ಶೇ. ೫೦ ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು, ಏ. ೫: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಜನವರಿ ೧ ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ ೧ ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. ೨.೭೫ ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ ರೂ. ೧೪೪೭ ಕೋಟಿ ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸ ಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ಕೂಡ ತನ್ನ ನೌಕರರಿಗೆ ಶೇ. ೩ ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು.

ಸರ್ಕಾರಿ ಮಾದರಿ ಶಾಲೆಗಳಲ್ಲಿ ‘ಸ್ಪೋಕನ್ ಇಂಗ್ಲೀಷ್'

ಬೆAಗಳೂರು, ಏ. ೫: ಉದ್ದೇಶಿತ ಸರ್ಕಾರಿ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ಶಾಲಾ ಹಂತದಿAದಲೇ ‘ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಸರ್ಕಾರಿ ಮಾದರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ಕಲಿಸಲಾಗುತ್ತದೆ ಎಂದು ತಿಳಿಸಿದರು. ಹೋಬಳಿ/ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದೊAದು ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ಸಾಲಿನ ಬಜೆಟ್‌ನಲ್ಲಿ ಈ ಅಂಶವನ್ನು ಘೋಷಣೆ ಮಾಡಲಾಗಿದೆ. ಶಾಲೆಯ ಎಲ್ಲ ತರಗತಿಗಳಿಗೆ ಅಗತ್ಯ ಕೊಠಡಿಗಳು ಮತ್ತು ಎಲ್ಲ ಭಾಷೆ ಮತ್ತು ವಿಷಯಕ್ಕೆ ತಲಾ ಒಬ್ಬರು ಶಿಕ್ಷಕರು ಲಭ್ಯವಿರುವಂತಹ ವ್ಯವಸ್ಥೆ ಮಾಡಲಾಗುತ್ತದೆ. ಇಂತಹ ಶಾಲೆಗಳಲ್ಲಿ ಕನ್ನಡ ಕಲಿಕೆ ಜೊತೆಗೆ ಇಂಗ್ಲೀಷ್ ಕಲಿಕೆ ಹಾಗೂ ಶಿಕ್ಷಕರಿಂದ ಸ್ಪೋಕನ್ ಇಂಗ್ಲೀಷ್ ಕಲಿಸಿಕೊಡಲಾಗುತ್ತದೆ. ಇದೇ ಸಲಹೆಯನ್ನು ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರೂ ನೀಡಿದ್ದು, ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸಚಿವ ನಾಗೇಶ್ ನುಡಿದರು.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಭಾರತದಿಂದ ನೆರವಿನ ಪ್ಯಾಕೇಜ್

ನವದೆಹಲಿ, ಏ. ೫: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಸುಮಾರು ೧.೫ ಬಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡುತ್ತಿದೆ. ಇಂಧನ ಮತ್ತು ಆಹಾರ ಸಂಗ್ರಹಣೆಗಾಗಿ ಭಾರತವು ಬಿಕ್ಕಟ್ಟು ಪೀಡಿತ ಶ್ರೀಲಂಕಾಕ್ಕೆ ತನ್ನ ನೆರವಿನ ಕ್ರೆಡಿಟ್ ಲೈನ್ಸ್ (ಐಔಅs) ಪ್ರಸ್ತುತ ಒಟ್ಟು ೧.೫ ಶತಕೋಟಿ ಡಾಲರ್‌ಗೆ ಏರಿಕೆ ಮಾಡಿದೆ. ಅಂತೆಯೇ ಸರಕುಗಳ ರವಾನೆ ಮತ್ತಷ್ಟು ಮುಂದುವರಿಯಲಿವೆ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೇ ತಿಳಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನಲ್ಲಿ ತತ್ತರಿಸುತ್ತಿರುವ ಶ್ರೀಲಂಕಾಕ್ಕೆ ಭಾರತವು ತನ್ನ ಆರ್ಥಿಕ ಪ್ಯಾಕೇಜ್ ಅನ್ನು ವಿಸ್ತರಿಸಿದ್ದು, ಅದು ಕೆಲವು ತಕ್ಷಣದ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಅದರ ದೇಶೀಯ ಆರ್ಥಿಕತೆಯನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಭಾರತೀಯ ರಾಯಭಾರಿ ಮೊದಲೇ ತಿಳಿಸಿದ್ದಂತೆ ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಭಾರತದಿಂದ ಆರ್ಥಿಕ ನೆರವು ೨.೫ ಶತಕೋಟಿ ಡಾಲರ್ ಮೀರಿತ್ತು. ಫೆಬ್ರವರಿಯಲ್ಲಿ ಇಂಧನ ಖರೀದಿಗಾಗಿ ೫೦೦ ಮಿಲಿಯನ್ ಡಾಲರ್ ಸಾಲಕ್ಕೆ ಸಹಿ ಹಾಕಲಾಗಿತ್ತು. ಮಾರ್ಚ್ ಆರಂಭದಿAದ, ಒಟ್ಟು ೧೫೦,೦೦೦ ಟನ್‌ಗಳಷ್ಟು ಜೆಟ್ ವಿಮಾನ ಇಂಧನ, ಡೀಸೆಲ್ ಮತ್ತು ಪೆಟ್ರೋಲ್ ಸೇರಿದಂತೆ ಒಟ್ಟು ನಾಲ್ಕು ಸರಕುಗಳು ಶ್ರೀಲಂಕಾಕ್ಕೆ ಬಂದಿವೆ ಎಂದು ಬಾಗ್ಲೇ ಮಾಹಿತಿ ನೀಡಿದ್ದಾರೆ. ಮೇ ತಿಂಗಳವರೆಗೆ ಇನ್ನೂ ಐದು ರವಾನೆಗಳನ್ನು ಪೂರ್ಣಗೊಳಿಸಿದ್ದು, ಇದರಲ್ಲಿ ಆಹಾರ, ಔಷಧ ಮತ್ತು ಅಗತ್ಯ ವಸ್ತುಗಳ ಮತ್ತೊಂದು ಸಾಲದ ೧ ಬಿಲಿಯನ್ ಡಾಲರ್‌ಗೆ ಕಳೆದ ತಿಂಗಳು ಸಹಿ ಹಾಕಲಾಗಿದೆ. ಶ್ರೀಲಂಕಾಗೆ ೧ ಬಿಲಿಯನ್ ಡಾಲರ್ ಸಾಲವು ಅವರ ಆಹಾರದ ಬೆಲೆಗಳು ಮತ್ತು ಇಂಧನ ವೆಚ್ಚಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಈ ಕ್ರೆಡಿಟ್ ಸೌಲಭ್ಯದ ಅಡಿಯಲ್ಲಿ ಭಾರತದಿಂದ ಅಕ್ಕಿಯ ಮೊದಲ ರವಾನೆಯು ಶ್ರೀಲಂಕಾಕ್ಕೆ ಶೀಘ್ರದಲ್ಲೇ ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದರು.