ಚೆಯ್ಯಂಡಾಣೆ, ಏ ೫: ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲ್ ಗ್ರಾಮದ ಚೋಕಿರ ಹಾಗೂ ಬಿದ್ದಂಡ ಕುಟುಂಬಕ್ಕೆ ತೆರಳುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ೨ ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು ಮರವನ್ನು ತೆರವುಗೊಳಿಸಲು ಮುಂದಾಗಿದ್ದಾರೆ.