ಮಡಿಕೇರಿ, ಏ. ೫ : ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳಲ್ಲಿಯ ಮರ ಗಿಡಗಳ ಮಧ್ಯದಲ್ಲಿ ಹಾದುಹೋಗಿದೆ. ಈಗಾಗಲೇ ಮಳೆ-ಗಾಳಿ ಪ್ರಾರಂಭವಾಗಿದ್ದು, ಮರಗಳ ರೆಂಬೆ ಕೊಂಬೆಗಳ ಬೀಳುವಿಕೆಯಿಂದಾಗಿ ಕಂಬಗಳು ಬಾಗಿ, ತಂತಿಗಳು ಕೆಳಮಟ್ಟಕ್ಕೆ ಇಳಿಯುವ ಸಾಧ್ಯತೆ ಇದೆ.

ಇದರಿಂದಾಗಿ ವಿದ್ಯುತ್ ಅಘಾತಗಳಾಗುವ ಸಂಭವವಿದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬAದರೆ ತಮ್ಮ ವ್ಯಾಪ್ತಿಯ ಸೆಸ್ಕ್ ಕಚೇರಿಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಸೆಸ್ಕ್ ಇಇ ಕೋರಿದ್ದಾರೆ.

ತೋಟಗಳಲ್ಲಿ ಒಳ್ಳೆ ಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪಿçಂಕ್ಲರ್ ಪೈಪ್‌ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ/ ಕಬ್ಬಿಣದ ಏಣಿ ಬದಲು ಬಿದಿರು/ ಫೈಬರ್ ಏಣಿಗಳನ್ನೇ ಉಪಯೋಗಿಸಿ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ವಿದ್ಯುತ್ ಇಲಾಖೆಯೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಕೋರಿದ್ದಾರೆ.