ಸೋಮವಾರಪೇಟೆ, ಏ. ೬: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ವತಿಯಿಂದ ಪಟ್ಟಣದಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಇಲ್ಲಿನ ವಿದ್ಯಾಗಣಪತಿ ದೇವಾಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಕಚೇರಿವರೆಗೆ ಮೆರವಣಿಗೆ ತೆರಳಿದರು. ನಂತರ ಪ್ರಧಾನ ಮಂತ್ರಿಗಳು ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಆಲಿಸಿದರು.

ಇದೇ ಸಂದರ್ಭ ಪಕ್ಷದ ಸಂಸ್ಥಾಪಕರುಗಳಾದ ಶ್ಯಾಂಪ್ರಸಾದ್ ಮುಖರ್ಜಿ ಹಾಗೂ ದೀನದಯಾಳ್ ಉಪಾಧ್ಯಾಯ ಮತ್ತು ಭಾರತ್ ಮಾತಾ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿ, ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪ್ರಪಂಚದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಭಾಜನವಾಗಿದ್ದು, ಇದನ್ನು ಕಟ್ಟಿ ಬೆಳೆಸಿದ ನಾಯಕರುಗಳನ್ನು ಸದಾ ಸ್ಮರಿಸಬೇಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾದರಿ ಆಡಳಿತ ನಡೆಸುತ್ತಿದ್ದು, ರಾಜ್ಯ ಸರ್ಕಾರವೂ ಸಹ ಸಮಾಜದ ಎಲ್ಲಾ ವರ್ಗದ ಮಂದಿಯ ಅಭ್ಯುದಯಕ್ಕಾಗಿ ಶ್ರಮಿಸುತ್ತಿದೆ. ಸರ್ಕಾರಗಳ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟಿಸಲು ಮುಖಂಡರು ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ರಾಜ್ಯ ಯುವ ಮೋರ್ಚಾದ ಮಹೇಶ್ ತಿಮ್ಮಯ್ಯ, ಪ್ರಭಾರಿ ರೂಪ ಸತೀಶ್, ಬಿಜೆಪಿ ನಗರಾಧ್ಯಕ್ಷ ಎಸ್.ಆರ್.ಸೋಮೇಶ್, ಜಿ.ಪಂ. ಮಾಜೀ ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಮಾಜೀ ಸದಸ್ಯೆ ಹೆಚ್.ಎನ್. ತಂಗಮ್ಮ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಗ್ರಾ.ಪಂ. ಸದಸ್ಯೆ ರೇಣುಕಾ, ಪ.ಪಂ. ಮಾಜೀ ಅಧ್ಯಕ್ಷೆ ಲೀಲಾ ನಿರ್ವಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಡಿಕೇರಿ: ಮಡಿಕೇರಿ ನಗರ ಬಿಜೆಪಿ ವತಿಯಿಂದ ಇಂದು ಸಂಸ್ಥಾಪನಾ ದಿನದ ಅಂಗವಾಗಿ ಹಿರಿಯ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಹಾಗೂ ಮನು ಮಂಜುನಾಥ ಅವರ ನೇತೃತ್ವದಲ್ಲಿ, ಡಾ. ಪಾಟ್ಕರ್, ಸೀತಾಲಕ್ಷಿö್ಮ ರಾಮಚಂದ್ರ ಹಾಗೂ ಕೃಷ್ಣಪ್ಪ ಅವರಿಗೆ ಸನ್ಮಾನಿಸಲಾಯಿತು. ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ತಾಲೂಕು ಅಧ್ಯಕ್ಷ ಸತೀಶ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್ ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ನಗರಸಭಾ ಸದಸ್ಯರಾದ ಕವನ್ ಕಾವೇರಪ್ಪ, ಚಿತ್ರಾವತಿ, ಕಲಾವತಿ, ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು.ಮಡಿಕೇರಿ: ನಗರದ ವಾರ್ಡ್ ನಂ. ೧೧ ರಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ಪಕ್ಷದ ವಾರ್ಡ್ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟಿçÃಯ ವಾದಿ ಪಕ್ಷವೆಂದು ತಿಳಿಸಿದರು. ದೇಶಭಕ್ತ ಕಾರ್ಯಕರ್ತರ ಶಕ್ತಿ ಬಿಜೆಪಿಗಿದೆ ಎಂದರು.

ನಗರಸಭಾ ಮಾಜಿ ಸದಸ್ಯ ಹಾಗೂ ಬಿಜೆಪಿ ಪ್ರಮುಖ ಶಜಿಲ್ ಹಾಕತ್ತೂರು: ಶಕ್ತಿ ಕೇಂದ್ರ ವತಿಯಿಂದ ಬಿಜೆಪಿಯ ಸಂಸ್ಥಾಪನ ದಿನಾಚರಣೆಯನ್ನು ಹಾಕತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಕತ್ತೂರು, ಕಗ್ಗೋಡ್ಲು ಗ್ರಾಮಗಳ ಬೂತ್ ಸಮಿತಿಗಳಲ್ಲಿ ಆಚರಣೆ ಮಾಡ ಲಾಯಿತು. ಕಗ್ಗೋಡ್ಲುವಿನ ಗ್ರಾಮ ಪಂಚಾಯತ್ ಸದಸ್ಯ ಪೊನ್ನಚ್ಚನ ಲೋಕೇಶ್ ಅವರ ಮನೆಯಲ್ಲಿ ಹಾಗೂ ಹಾಕತ್ತೂರುವಿನ ಬೂತ್ ಅಧ್ಯಕ್ಷ ರಾಜೇಶ್ ಅವರ ಮನೆಯಲ್ಲಿ ಬಿಜೆಪಿ ಪಕ್ಷದ ಧ್ವಜಾರೋಹಣ ಮಾಡಲಾಯಿತು.

ಕೃಷ್ಣ ಮತ್ತಿತರರು ಈ ಸಂದರ್ಭ ಹಾಜರಿದ್ದರು.ಕಾರ್ಯಕ್ರಮದಲ್ಲಿ ಶಕ್ತಿ ಕೇಂದ್ರ ಪ್ರಮುಖ ಪಿ.ಪಿ. ಸುಕುಮಾರ್. ಕಗ್ಗೋಡ್ಲು ಬೂತ್ ಅಧ್ಯಕ್ಷ ಪರ್ಲಕೋಟಿ ಸಜನ್, ಗ್ರಾಮ ಪಂಚಾಯಿತಿ ಸದಸ್ಯೆ ವಿಜಯಲಕ್ಷಿö್ಮ, ಬೂತ್ ಸದಸ್ಯರಾದ ರವಿ, ಮಂಜುನಾಥ್. ಮಹಿಳಾ ಕಾರ್ಯಕರ್ತರು ಹಾಜರಿದ್ದರು.