ಮಡಿಕೇರಿ, ಏ. ೬: ಗಂಗಾ ಕಲ್ಯಾಣ ಯೋಜನೆಗೆ ಸಂಬAಧಿಸಿ ದಂತೆ ಜಿಲ್ಲೆಯಲ್ಲಿನ ಪ್ರಗತಿ ಕುರಿತು ವರದಿ ತಯಾರಿಸಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಂಗಾ ಕಲ್ಯಾಣ ಯೋಜನೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಟಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು ಗಂಗಾಕಲ್ಯಾಣ ಯೋಜನೆ ಸಂಬAಧ ಮಾಹಿತಿ ಪಡೆದ ಬಳಿಕ ಅವರು ಸೂಚನೆ ನೀಡಿದರು. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಹದೇವಿ ಅವರು, ಗಂಗಾ ಕಲ್ಯಾಣ ಯೋಜನೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ೬೧ ಫಲಾನುಭವಿಗಳಿದ್ದು, ೬೧ ಬೋರ್‌ವೆಲ್‌ಗಳನ್ನು ತೆಗೆಯಲಾಗಿದೆ. ೧೧ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಉಳಿದ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿಯಿದೆ ಎಂದು ತಿಳಿಸಿದರು.

(ಮೊದಲ ಪುಟದಿಂದ) ಸೆಸ್ಕ್ ಅಧಿಕಾರಿ ವಿನಯ್ ಕುಮಾರ್ ಅವರು ಗಂಗಾ ಕಲ್ಯಾಣ ಯೋಜನೆಗೆ ಸಂಬAಧಿಸಿದAತೆ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಂಸ್ಥೆಯನ್ನು ಗುರುತಿಸಲಾಗಿದೆ. ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದರು. ಜಿಲ್ಲಾಧಿಕಾರಿ ಬಿ.ಸಿ. ಸತೀಶ ಅವರು ಮಾತನಾಡಿ, ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳ ಜಾಗಗಳನ್ನು ಪ್ರತ್ಯೇಕವಾಗಿ ವೀಕ್ಷಣೆ ಮಾಡಿ ಮಾಹಿತಿ ನೀಡುವಂತೆ ಹೇಳಿದರು.

ಜಿಲ್ಲೆಯ ನಾಲ್ಕು ನಾಡು ಅರಮನೆ ವ್ಯಾಪ್ತಿಯಲ್ಲಿ ೩೨ ಮನೆಗಳಿದ್ದು, ಸುಮಾರು ೧೫೦ ಕ್ಕಿಂತ ಹೆಚ್ಚು ಜನಸಂಖ್ಯೆ ಇದೆ. ಅವರು ವಾಸಿಸುತ್ತಿರುವ ಸ್ಥಳದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆದು ಪಡಿತರವನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಕೆ.ಜಯಪ್ರಕಾಶ್ ಹೆಗ್ಡೆ ಅವರು ಜಿಲ್ಲಾಧಿಕಾರಿಗೆ ತಿಳಿಸಿದರು.

ಕಕ್ಕಬ್ಬೆ ಗ್ರಾ.ಪಂ.ವ್ಯಾಪ್ತಿಯ ನಾಲ್ಕು ನಾಡು ಅರಮನೆ ವ್ಯಾಪ್ತಿಯಲ್ಲಿ ಕಾಪಾಳ ಸಮಾಜದವರು ವಾಸಿಸುತ್ತಿದ್ದು, ಇವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಯೋಗದ ಅಧ್ಯಕ್ಷರು ಸೂಚನೆ ನೀಡಿದರು.

ಕಾಪಾಳ ಜನಾಂಗದ ಪ್ರಮುಖರಾದ ಪೊನ್ನಪ್ಪ ಮಾತನಾಡಿ ೬೦ ಎಕರೆ ಜಾಗದಲ್ಲಿ ಕಾಪಾಳ ಸಮಾಜದವರು ನೆಲೆಸಿದ್ದು, ತಾತ ಮುತ್ತಾತಂದಿರ ಹೆಸರಿನಲ್ಲಿ ಭೂಮಿ ಇದೆ. ಆದರೆ ಮಕ್ಕಳ ಹೆಸರಿಗೆ ಆರ್‌ಟಿಸಿ ಆಗಿಲ್ಲ. ಇದನ್ನು ಪರಿಶೀಲಿಸಿ ಆರ್‌ಟಿಸಿ ಮಾಡಿಕೊಡಬೇಕೆಂದು ಮನವಿ ಮಾಡಿದರು. ಕಾಪಾಳ ಜನಾಂಗದವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ತುಂಬಾ ಹಿಂದೆ ಉಳಿದಿದ್ದು, ಕಾಪಾಳ ಜನಾಂಗಕ್ಕೆ ಯಾವುದೇ ರೀತಿಯ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಅವರು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಾತ ಮುತ್ತಾತಂದಿರ ಹೆಸರಿನಲ್ಲಿ ಇರುವ ಭೂಮಿಯನ್ನು ವಂಶಾವಳಿ ಪ್ರಕಾರ ಆರ್‌ಟಿಸಿಯಲ್ಲಿ ಕುಟುಂಬಸ್ಥರ ಹೆಸರನ್ನು ಸೇರಿಸಿ ಮಾರ್ಪಡಿಸಿ ಕೊಡಲಾಗುವುದು ಎಂದು ಅಧ್ಯಕ್ಷರ ಗಮನಕ್ಕೆ ತಂದರು.

ಕುಟುಂಬದಲ್ಲಿ ತೀರಿಕೊಂಡವರ ಹೆಸರನ್ನು ತೆಗೆದುಹಾಕಿ ವಂಶಾವಳಿ ತಯಾರಿಸಿ ಕರಡು ಪ್ರತಿಯನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಿ ಆರ್‌ಟಿಸಿ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕಾಪಾಳರ ಬೇಡಿಕೆ ಬಗ್ಗೆ ಪ್ರಕಾಶ ಅವರು ಆಯೋಗದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಕಾಪಾಳ ಕಾಲೋನಿಗೆ ಹೋಗುವ ರಸ್ತೆಯನ್ನು ಗ್ರಾ.ಪಂ. ವತಿಯಿಂದ ದುರಸ್ತಿ ಪಡಿಸಿ, ವಿದ್ಯುತ್ ದೀಪ, ಕುಡಿಯುವ ನೀರು ಒದಗಿಸುವಂತಾಗಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಕಾಪಾಳ ಜನಾಂಗದವರು ವಾಸಿಸುತ್ತಿರುವ ಕಾಲೋನಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು ೩೮ ವಿದ್ಯಾರ್ಥಿ ನಿಲಯಗಳಿದ್ದು, ಮಂಜೂರಾದ ೨,೬೫೫ ರಲ್ಲಿ ೧,೯೦೦ ಮಂದಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಜಿಲ್ಲೆಯ ೩೮ ವಿದ್ಯಾರ್ಥಿ ನಿಲಯಗಳಲ್ಲಿ ೨೮ ಸ್ವಂತ ಕಟ್ಟಡಗಳು, ೬ ಬಾಡಿಗೆ ಕಟ್ಟಡಗಳು, ೦೪ ಉಚಿತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದAತೆ ೨೦೨೧-೨೨ ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯಕ್ರಮದಡಿ ೨೭೦.೮೮ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಶೇ.೧೦೦ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಹಾಗೂ ವಕೀಲರ ಪ್ರೋತ್ಸಾಹಧನಕ್ಕೆ ಸಂಬAಧಿಸಿದAತೆ ವಾರ್ಷಿಕ ೪೦ ಗುರಿಗಳಲ್ಲಿ ೨೯ ಫಲಾನುಭವಿಗಳು ಸೌಲಭ್ಯವನ್ನು ಪಡೆಯುತ್ತಿದ್ದು, ಶೇ.೭೨.೫೦ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿ ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸದಸ್ಯರಾದ ಎಚ್.ಎಸ್.ಕಲ್ಯಾಣ್ ಕುಮಾರ್, ಬಿ.ಎಸ್.ರಾಜಶೇಖರ್, ಕೆ.ಟಿ.ಸುವರ್ಣ, ಅರುಣ್ ಕುಮಾರ್, ಶಾರದ ನಾಯ್ಕ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಪ್ರಕಾಶ, ಯೋಗಾನಂದ, ಪ್ರಶಾಂತ್, ಬಿಸಿಎಂ ಇಲಾಖೆಯ ವ್ಯವಸ್ಥಾಪಕರಾದ ಕವಿತಾ, ಇತರರು ಇದ್ದರು.