ಗೋಣಿಕೊಪ್ಪಲು, ಏ.೬: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಬುಡಕಟ್ಟು ಕಾರ್ಮಿಕರ ಸಂಘದ ವತಿಯಿಂದ ಗೋಣಿಕೊಪ್ಪಲುವಿನಲ್ಲಿ ಕಾರ್ಮಿಕರ ಸಮಾವೇಶ, ಜಾಥ ಹಾಗೂ ವಾರ್ಷಿಕ ಸಭೆ ನಡೆಯಿತು. ಬುಡಕಟ್ಟು ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ವೈ.ಬಿ.ಗಪ್ಪು ಅಧ್ಯಕ್ಷತೆಯಲ್ಲಿ ನಡೆದ ಈ ಜಾಥವು ನಗರದ ಆರ್.ಎಂ.ಸಿ. ಸಭಾಂಗಣದಿAದ ಹೊರಟು ಬಸ್ ನಿಲ್ದಾಣ ಸಮೀಪ ಮುಕ್ತಾಯ ಗೊಂಡಿತು.
ಮೆರವಣಿಗೆಯಲ್ಲಿ ಬುಡಕಟ್ಟು ಜನಾಂಗದ ದುಡಿಕೊಟ್ ತಂಡ ಸಾಗಿ ಬಂತು, ಕಾರ್ಮಿಕರ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಘೋಷಣೆ ಕೂಗಿದರು. ತಾಲೂಕಿನ ವಿವಿಧ ಭಾಗದಿಂದ ಹಲವಾರು ಕಾರ್ಮಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಸಮಾವೇಶವು ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಜರುಗಿತು. ವೈ.ಬಿ.ಗಪ್ಪು ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ವನವಾಸಿ ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ಚೆಕ್ಕೇರ ಮನು ಕಾವೇರಪ್ಪ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಬುಡಕಟ್ಟು ಜನಾಂಗವು ವಿದ್ಯಾಭ್ಯಾಸದಿಂದ ವಂಚಿತರಾಗದAತೆ ಎಚ್ಚರ ವಹಿಸಬೇಕು, ಸರ್ಕಾರದ ಸವಲತ್ತುಗಳನ್ನು ಪಡೆದು ಅಭಿವೃದ್ಧಿ ಹೊಂದುವAತೆ ಕರೆ ನೀಡಿದರು.
ತಾಲೂಕು ಗಿರಿಜನ ಕಲ್ಯಾಣ ಅಧಿಕಾರಿಗಳಾದ ಗುರುಶಾಂತಪ್ಪ ಮಾತನಾಡಿ ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ರೀತಿಯ ಯೋಜನೆ ಅನುಷ್ಠಾನ ಗೊಳಿಸಿದೆ. ಇದನ್ನು ಸದ್ಬಳಕೆ ಮಾಡಿ ಕೊಂಡು ಆರ್ಥಿಕ ವಾಗಿ ಸಭಲರಾಗಬೇಕು, ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಸಂಘಟನೆ ಗಳು ಕೆಲಸ ನಿರ್ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬುಡಕಟ್ಟು ಕಾರ್ಮಿಕರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.