ಮಡಿಕೇರಿ, ಏ. ೬: ಜವಾಹರ್ ನವೋದಯ ವಿದ್ಯಾಲಯದ ೯ನೇ ತರಗತಿಗೆ ಪ್ರವೇಶ ಪರೀಕ್ಷೆ ತಾ. ೯ ರಂದು ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರಗಳು ನವೋದಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ರಿಜಿಸ್ಟೆçÃಶನ್ ಸಂಖ್ಯೆ ಬಳಸಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗದೇ ಇರುವ ಕೊಡಗು ಜಿಲ್ಲೆಯ ಅಭ್ಯರ್ಥಿಗಳು ನವೋದಯ ವಿದ್ಯಾಲಯ ಕಚೇರಿ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಅಥವಾ ವಿದ್ಯಾಲಯಕ್ಕೆ ಬಂದು ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ ಎಂದು ಪ್ರಾಂಶುಪಾಲ ಪಂಕಜಾಕ್ಷನ್ ಓ.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾ. ೯ ರಂದು ಬೆಳಿಗ್ಗೆ ೧೧.೧೫ ರಿಂದ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ ೧೦.೩೦ಕ್ಕೆ ಅಭ್ಯರ್ಥಿಗಳು ಹಾಜರಿರಬೇಕು. ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ೭೭೬೦೮೯೮೧೪೮ ಸಂಖ್ಯೆಯನ್ನು ಸಂಪರ್ಕಿಸಬಹುದು.